Kannada News

ಶಂಕರಗೌಡ ಪಾಟೀಲ ಅಧಿಕಾರ ಸ್ವೀಕಾರ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು –  ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ಶಂಕರಗೌಡ ಪಾಟೀಲ ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ವಿಧಾನಸೌಧದ ತಮ್ಮ ಕಚೇರಿ ಸಂಖ್ಯೆ 305 ರಲ್ಲಿ ಪೂಜಾ ಕಾರ್ಯಕ್ರಮ ನಡೆಸಿದ ಅವರು ಅಧಿಕಾರ ಸ್ವೀಕರಿಸಿದರು. ವಿಧಾನ ಸೌಧಕ್ಕೆ ತೆರಳುವ ಮುನ್ನ ಮುಖ್ಯಮಂತ್ರಿಗಳ ಡಾಲರ್ಸ್ ಕಾಲೋನಿಯ ಮನೆಗೆ ತೆರಳಿ ಅವರ ಆರ್ಶಿವಾದ ಪಡೆದು ಬಂದಿದ್ದರು.

 

ಪೂಜೆ  ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಮುಖ್ಯಮಂತ್ರಿಗಳ ಮತ್ತೋರ್ವ ‌ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ, ಹಲವಾರು ಶಾಸಕರು, ವಿಧಾನಸೌಧದ ಆಡಳಿತ ವರ್ಗ, ರಾಜ್ಯ ರೈತ ಮೋರ್ಚಾ ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಸೇರಿದಂತೆ ಅನೇಕ  ಗಣ್ಯರು ಉಪಸ್ಥಿತರಿದ್ದರು.

Home add -Advt

Related Articles

Back to top button