
ಪ್ರಗತಿವಾಹಿನಿ ಸುದ್ದಿ, ತುಮಕೂರು – ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ ಶುಕ್ರವಾರ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದರು.
ಸಿದ್ಧಗಂಗಾ ಮಠದ ಹಿರಿಯ ಸ್ವಾಮೀಜಿಯನ್ನು ಭೇಟಿ ಮಾಡಿದ ಶಂಕರಗೌಡ ಪಾಟೀಲ ಅವರ ಆಶಿರ್ವಾದ ಪಡೆದರು. ಕೊರೊನಾ ಹಾವಳಿ ವಿರುದ್ಧ ಬಿ.ಎಸ್.ಯಡಿಯೂರಪ್ಪ ತೆಗೆದುಕೊಂಡಿರುವ ಕ್ರಮಗಳ ಕುರಿತು ಶ್ರೀಗಳಿಗೆ ಮಾಹಿತಿ ನೀಡಿದ ಶಂಕರಗೌಡ, ರಾಜ್ಯದ ಪರಿಸ್ಥಿತಿ ಕುರಿತು ಚರ್ಚಿಸಿದರು.
ಸಿದ್ದಗಂಗಾ ಮಠದಲ್ಲಿ ಕೊರೋನಾ ತಡೆಯಲು ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಶಂಕರಗೌಡ ಪಾಟೀಲ ಶ್ಲಾಘಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ