Latest
ಶಂಕರಗೌಡ ಪಾಟೀಲ ಪ್ರಯತ್ನ: ಸಣ್ಣ ರೈತರಿಗೆ ಉಚಿತ ಬಿತ್ತನೆ ಬೀಜ ವಿತರಣೆ, ಸಿಎಂ ಚಾಲನೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ್ ಅವರ ಪ್ರಯತ್ನದ ಫಲವಾಗಿ ಸಣ್ಣ ರೈತರಿಗೆ ಉಚಿತವಾಗಿ ಬಿತ್ತನೆ ಬೀಜ ವಿತರಣೆ ಆರಂಭವಾಗಿದೆ.
ಬಾಯರ್ ಕ್ರಾಪ್ ಸೈನ್ಸ್ ಲಿಮಿಟೆಡ್ ಸಂಸ್ಥೆಯ ವತಿಯಿಂದ ಸಣ್ಣ ರೈತರಿಗೆ ಉಚಿತ ಕೃಷಿ ಬಿತ್ತನೆ ಬೀಜಗಳನ್ನು ವಿತರಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್, ಶಂಕರಗೌಡ ಪಾಟೀಲ್, ಬಾಯರ್ ಕ್ರಾಪ್ ಸೈನ್ಸ್ ಸಂಸ್ಥೆಯ ಮ್ಯಾನೇಜರ್ ಮ್ಯಾಥು ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.




