Kannada NewsKarnataka NewsLatest

ಶಂಕರಗೌಡ ಪಾಟೀಲ್ ಅವರಿಗೆ ಅಂತಾರಾಷ್ಟ್ರೀಯ ಗೋಲ್ಡನ್ ಈಗಲ್ ಅವಾರ್ಡ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -ಅಮೇರಿಕಾದ ಸಮುದಾಯ ಸಂಸ್ಥೆ ಎಎಂಇಸಿ ಕೊಡಮಾಡುವ  ಅಂತಾರಾಷ್ಟ್ರೀಯ ಮಟ್ಟದ ವಾರ್ಷಿಕ ಪ್ರಶಸ್ತಿ ಗ್ಲೋಬಲ್ ಕಮ್ಯುನಿಟಿ ಆಸ್ಕರ್ಸ್ ಗೋಲ್ಡನ್ ಈಗಲ್ ಅವಾರ್ಡ್  ‘ಗಾಲಾ -2019’ಕ್ಕೆ ಕರ್ನಾಟಕದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಸಾಮಾಜಿಕ ಹೋರಾಟಗಾರ ಶಂಕರಗೌಡ ಪಾಟೀಲ ಆಯ್ಕೆಯಾಗಿದ್ದಾರೆ.

ಸಾಮಾಜಿಕ , ಸಾಂಸ್ಕೃತಿ, ಶೈಕ್ಷಣಿಕ, ಆರೋಗ್ಯ, ಆರ್ಥಿಕ ಮತ್ತು ಯುವಜನಸೇವಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಉದ್ಯಮಿಗಳು, ಸಾಮಾಜಿಕ ಕಾರ್ಯಕರ್ತರು, ವೈದ್ಯರು, ಉದ್ಯೋಗಸ್ಥರನ್ನು ಈ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ.

ನವೆಂಬರ್ 10ರಂದು ಶಿಕಾಗೋ ಲ್ಯಾಂಡ್ ನ ಮಿಡೋವ್ಸ್ ಕನ್ವೆನ್ಶನ್ ಸೆಂಟರ್ ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ವಿಶ್ವದ 24 ರಾಷ್ಟ್ರಗಳಿಂದ ಒಬ್ಬೆೊಬ್ಬರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ವಿಶ್ವದ ವಿವಿಧೆಡೆಯಿಂದ ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಶಂಕರಗೌಡ ಪಾಟೀಲ ಅವರ ಅನುಪಸ್ಥಿತಿಯಲ್ಲಿ ಅವರ ಪುತ್ರ ಅಕ್ಷಯ್ ಪಾಟೀಲ್ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button