ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಲೋಕೋಪಯೋಗಿ ಇಲಾಖೆಯ ನಿವೃತ್ತ ಎಂಜಿನಿಯರ್ ಶಂಕರೆಪ್ಪ ಖೋತ್ ನಿಧನರಾಗಿದ್ದಾರೆ.
ಮೂಲತಃ ಬಾಗಲಕೋಟ ಜಿಲ್ಲೆಯ ಬೀಳಗಿ ತಾಲೂಕಿನ ಕುಂದರಗಿ ಗ್ರಾಮದ ಶಂಕರೆಪ್ಪ ಖೋತ ಅವರು ಇಂದು ನಿಧನರಾದರು. ಮೃತರು ಪತ್ನಿ, ಇಬ್ಬರು ಗಂಡು ಮಕ್ಕಳು, ನಾಲ್ವರು ಹೆಣ್ಣುಮಕ್ಕಳು, ಅಳಿಯಂದಿರು, ೧೧ ಮೊಮ್ಮಕ್ಕಳು, ೪ ಮರಿಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.
ವೃತ್ತಿಯಲ್ಲಿ ಸಿವಿಲ್ ಇಂಜೀನಿಯರ್ ಆಗಿದ್ದ ಅವರು ಲೋಕೋಪಯೋಗಿ ಇಲಾಖೆಯಲ್ಲಿ ಸುಮಾರು ೩೨ ವರ್ಷಗಳ ಕಾಲ ಧಾರವಾಡ, ಕಾರವಾರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಬೆಳಗಾವಿಯ ಇನಸ್ಟಿಟ್ಯೂಟ್ ಆಫ್ ಇಂಜಿನೀಯರ‍್ಸ್ ಅಸೋಸಿಯೇಶನ್ ಸಕ್ರಿಯ ಕಾರ‍್ಯಕರ್ತರಾಗಿದ್ದ ಖೋತ್ ಅವರಿಗೆ ಅದೇ ಸಂಸ್ಥೆ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿ ಲಭಿಸಿದೆ.
ಕೆಎಲ್‌ಇ ಸಂಸ್ಥೆಯ ಆಸ್ಪತ್ರೆಯ ಕಟ್ಟಡ ನಿರ್ಮಾಣ ಸಮಿತಿಯ ಗೌರವ ಸಲಹೆಗಾರರಾಗಿ ಕಾರ‍್ಯನಿರ್ವಹಿಸಿದ್ದ ಅವರು ಸಾಮಾಜಿಕ ಕಾಳಜಿಯುಳ್ಳವರಾಗಿದ್ದರು. ಶಿಕ್ಷಣಕ್ಕೆ ಪ್ರಾಧಾನ್ಯತೆ ನೀಡುತ್ತಿದ್ದ ಇವರು ತಮ್ಮ ಹುಟ್ಟೂರಾದ ಕುಂದರಗಿ ಗ್ರಾಮದಲ್ಲಿ ಶಾಲೆ ತೆರೆಯಲು ೬ ಎಕರೆ ಭೂಮಿ ದಾನ ಮಾಡಿ, ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸಿಕೊಟ್ಟಿದ್ದಾರೆ.
ಡಾ.ಕೋರೆ ಶೋಕ:
ಲೋಕೊಪಯೋಗಿ ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದ ಶಂಕರೆಪ್ಪ ಖೋತ ಅವರ ಸಾವು ನನಗೆ ಅತೀವ ದುಃಖ ತರಿಸಿದೆ. ಅತ್ಯಂತ ಆತ್ಮೀಯರಾಗಿ, ಸಲಹೆಗಾರರಾಗಿ ನನಗೆ ಮಾರ್ಗದರ್ಶಕರಾಗಿದ್ದರು. ಅವರ ನಿಧನದಿಂದ ನಾನು ಓರ್ವ ಚಾಣಾಕ್ಷ ಮಾರ್ಗದರ್ಶಕರನ್ನು ಕಳೆದುಕೊಂಡಂತಾಗಿದೆ ಎಂದು ಕೆಎಲ್‌ಇ ಸಂಸ್ಥೆ ಕಾರ‍್ಯಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಅವರು ಶೋಕ ವ್ಯಕ್ತಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ