ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ವಿದ್ಯುನ್ಮಾನ ಮತಯಂತ್ರ (ಇವಿಎಂ) ಕುರಿತು ಚರ್ಚಿಸಲು ಎನ್ ಪಿಸಿ ಮುಖ್ಯಸ್ಥ ಶರದ್ ಪವಾರ್ ಗುರುವಾರ ಸಂಜೆ ತಮ್ಮ ನಿವಾಸದಲ್ಲಿ ಸಭೆ ಕರೆದಿದ್ದು, ವಿರೋಧ ಪಕ್ಷಗಳ ನಾಯಕರನ್ನೂ ಆಹ್ವಾನಿಸಿದ್ದಾರೆ.
ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಹಿತದೃಷ್ಟಿ ಮತ್ತು ಪ್ರಸಿದ್ಧ ಐಟಿ ವೃತ್ತಿಪರರು ಮತ್ತು ಕ್ರಿಪ್ಟೋಗ್ರಾಫರ್‌ಗಳು ವ್ಯಕ್ತಪಡಿಸಿದ ಅಭಿಪ್ರಾಯಗಳನ್ನು ಆಲಿಸಲು ಸಭೆ ಕರೆದಿದ್ದಾರೆ.
ಇವಿಎಂ ಮತ ಯಂತ್ರಗಳ ಕಾರ್ಯ , ಅವುಗಳ ದುರುಪಯೋಗವಾಗುತ್ತಿರುವ ಬಗ್ಗೆ ಹಲವು ವರ್ಷಗಳಿಂದ ಎಲ್ಲ ಪಕ್ಷಗಳು ಅನುಮಾನ ವ್ಯಕ್ತಪಡಿಸುತ್ತಿವೆ. ವಿದ್ಯುನ್ಮಾನ ಮತಯಂತ್ರ (ಇವಿಎಂ) ಕಾರ್ಯದ ಬಗ್ಗೆ ಅನುಮಾನ ಹೊಂದಿರುವ ವಿಪಕ್ಷ ನಾಯಕರುಗಳಿಗೆ ಬರೆದಿರುವ ಪತ್ರದಲ್ಲಿ ಎನ್ ಸಿ ಪಿ ಮುಖ್ಯಸ್ಥರು ತಿಳಿಸಿದ್ದಾರೆ.
ಕಾರ್ಯಕರ್ತರು ಮತ್ತು ರಾಜಕೀಯ ಪಕ್ಷಗಳು ಎತ್ತಿರುವ ಸಂದೇಹಗಳಿಗೆ ಸ್ಪಷ್ಟ ಉತ್ತರ ನೀಡುವುದಾಗಿ ಮುಖ್ಯ ಚುನಾವಣಾ ಆಯುಕ್ತರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆಯಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ