Kannada NewsKarnataka NewsLatestPolitics

*ಮಹಾ ಮೈತ್ರಿಕೂಟ ಸಭೆಗೆ ಆಗಮಿಸಿದ NCP ಮುಖ್ಯಸ್ಥ ಶರದ್ ಪವಾರ್; ಆತ್ಮೀಯವಾಗಿ ಬರಮಾಡಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ಕೇಂದ್ರದ ಪ್ರತಿಪಕ್ಷಗಳ ಸಭೆಗೆ ಆಗಮಿಸಿದ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಸ್ವಾಗತಿಸಿದರು.

ಬೆಂಗಳೂರಿನ ಎಚ್ ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆತ್ಮೀಯವಾಗಿ ಬರಮಾಡಿಕೊಂಡರು.

ಇದೇ ವೇಳೆ ಸಚಿವ ಎಂ.ಬಿ.ಪಾಟೀಲ್, ಮಾಜಿ ಸಚಿವರಾದ ಆರ್.ವಿ.ದೇಶಪಾಂಡೆ, ಪಿಜಿಆರ್ ಸಿಂಧ್ಯಾ, ವಿಧಾನಪರಿಷತ್ ಸದಸ್ಯ ಚೆನ್ನರಾಜ್ ಹಟ್ಟಿಹೊಳಿ ಉಪಸ್ಥಿತರಿದ್ದರು.

ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ವಿಪಕ್ಷ ನಾಯಕ ಮಹಾ ಮೈತ್ರಿಕೂಟ ಸಭೆ ನಡೆಯುತ್ತಿದ್ದು, ಸಭೆಯಲ್ಲಿ 24 ಪಕ್ಷಗಳ ನಾಯಕರು ಭಾಗಿಯಾಗಿದ್ದಾರೆ.

Related Articles

Back to top button