Latest

*ಅಮೃತ ವರ್ಷಿಣಿ ಸಿನಿಮಾ ಖ್ಯಾತಿಯ ಶರತ್ ಬಾಬು ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಅಮೃತ ವರ್ಷಿಣಿ ಖ್ಯಾತಿಯ ಹಿರಿಯ ನಟ ಶರತ್ ಬಾಬು ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.

ಹೈದರಾಬಾದ್ ನ ಗಚ್ಚಿಬೌಲಿಯ ಎಐಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶರತ್ ಬಾಬು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಶರತ್ ಬಾಬು ಬಳಲುತ್ತಿದ್ದರು.

Home add -Advt

1973ರಲ್ಲಿ ಚಿತ್ರರಂಗ ಪ್ರವೇಶಿಸಿದ್ದ ಶರತ್ ಬಾಬು ತೆಲುಗು, ತಮಿಳು, ಕನ್ನಡ ಚಿತ್ರರಂಗದಲ್ಲಿ ಜನಪ್ರಿಯ ನಟರಾಗಿ ಗುರುತಿಸಿಕೊಂಡಿದ್ದರು. ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ಮುತ್ತು, ಅರುಣಾಚಲಂ ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದರು. 40 ವರ್ಷಗಳ ಕಾಲ ಸಿನಿ ಜರ್ನಿಯಲ್ಲಿ ಸುಮಾರು 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಹಾಗೂ ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿದ್ದರು.

ಹಿರಿಯ ನಟನ ಅಗಲಿಕೆಗೆ ಇಡೀ ದಕ್ಷಿಣ ಭಾರತ ಚಿತ್ರರಂಗವೇ ಕಂಬನಿ ಮಿಡಿದಿದೆ.

https://pragati.taskdun.com/ksrtccaraccident5-injuerd/

Related Articles

Back to top button