Kannada NewsKarnataka NewsLatest
ಶಶಿಧರ ಘಿವಾರಿ ನಿಧನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕನ್ನಡ ಹೋರಾಟಗಾರ, ಸಿರಿಗನ್ನಡ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಶಶಿಧರ ಘಿವಾರಿ (60) ನಿಧನರಾಗಿದ್ದಾರೆ.
ಕೊರೋನಾ ಮಹಾಮಾರಿ ಅವರನ್ನು ಬಲಿತೆಗೆದುಕೊಂಡಿದೆ. ಕೆಲಕಾಲ ಪತ್ರಕರ್ತರಾಗಿ ಕೆಲಸ ಮಾಡಿದ್ದ ಘಿವಾರಿ ಎಲ್ಐಸಿ ಏಜಂಟರಾಗಿಯೂ ಕಾರ್ಯನಿರ್ವಹಿಸಿದ್ದರು.
ಸಿರಿಗನ್ನಡ ರಾಷ್ಟ್ರೀಯ ಪ್ರತಿಷ್ಠಾನ ಸ್ಥಾಪಿಸಿ ಅದರ ಮೂಲಕ ನೂರಾರು ಕಲಾವಿದರಿಗೆ, ಪ್ರತಿಭಾನ್ವಿತರಿಗೆ ಪ್ರಶಸ್ತಿಗಳನ್ನು ನೀಡಿದ್ದಾರೆ. ಪ್ರತಿವರ್ಷ ಸಿರಿಗನ್ನಡ ಪ್ರಶಸ್ತಿ ವಿತರಣಾ ಸಮಾರಂಭವನ್ನು ಬೆಂಗಳೂರು ಮತ್ತು ಬೆಳಗಾವಿಯಲ್ಲಿ ಆಯೋಜಿಸುತ್ತಿದ್ದರು.




