ಅಮಿತ್ ಶಾ ಭೇಟಿ ಮಾಡಿ ಮಾರ್ಗದರ್ಶನ ಪಡೆದ ಶಶಿಕಲಾ ಜೊಲ್ಲೆ
ಪ್ರಗತಿವಾಹಿನಿ ಸುದ್ದಿ, ನವದೆಹಲಿ- ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಮತ್ತು ಲೋಕಸಭಾ ಸದಸ್ಯ ಅಣ್ಣಾ ಸಾಹೇಬ ಜೊಲ್ಲೆ ನವದೆಹಲಿಯಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೂ, ಕೇಂದ್ರ ಗೃಹ ಸಚಿವರೂ ಆಗಿರುವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು.
ಜೊಲ್ಲೆ ದಂಪತಿ ಅಮಿತ್ ಶಾ ಅವರನ್ನು ಸತ್ಕರಿಸಿ, ಅಭಿವೃದ್ಧಿ ಕೆಲಸಗಳ ಕುರಿತು ಅವರ ಮಾರ್ಗದರ್ಶನ ಪಡೆದರು. ಮೊದಲ ಬಾರಿಗೆ ಸಚಿವೆಯಾಗಿರುವ ಶಶಿಕಲಾ ಜೊಲ್ಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಂಬಂಧಿಸಿದಂತೆ ಅಭಿವೃದ್ಧಿ ಕಾರ್ಯಗಳ ಕುರಿತು ಅಮಿತ್ ಶಾ ಅವರಿಂದ ಸಲಹೆಗಳನ್ನು ಪಡೆದುಕೊಂಡರು.
ಹಾಗೆಯೇ ಪಕ್ಷ ಸಂಘಟನೆ ಮತ್ತು ಸಾಮಾಜಿಕ ಕಾರ್ಯಗಳ ಕುರಿತೂ ಈ ಸಂದರ್ಭದಲ್ಲಿ ಚರ್ಚೆ ನಡೆಸಲಾಯಿತು.
ಜೊಲ್ಲೆ ದಂಪತಿ ಗಡಿ ಭಾಗದಲ್ಲಿ ನಡೆಸುತ್ತಿರುವ ಜೊಲ್ಲೆ ಉದ್ಯೋಗ ಸಮೂಹದ ಪ್ರಸ್ತುತ ಕಾರ್ಯಚಟುವಟಿಕೆಗಳ ಕುರಿತು ಸಹ ಅಮಿತ ಶಾ ಮಾಹಿತಿ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಭಾಜಪಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಭೂಪೇಂದ್ರ ಯಾದವ್ ಸಹ ಉಪಸ್ಥಿತರಿದ್ದರು.
(ಪ್ರಗತಿವಾಹಿನಿ ಸುದ್ದಿಗಳನ್ನು ಎಲ್ಲ ಗ್ರುಪ್ ಗಳಿಗೆ ಕಳಿಸಿ)
ಇದನ್ನೂ ಓದಿ –
ಸವದಿಯೋ?, ಜೊಲ್ಲೆಯೋ; ಯಾರಿಗೆ ಸಿಗಲಿದೆ ಉಸ್ತುವಾರಿ ಪಟ್ಟ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ