Kannada NewsLatest

ಸ್ವಾವಲಂಬನೆ ಮಹಿಳೆಯರ ಗುರಿಯಾಗಲಿ: ಸಚಿವೆ ಶಶಿಕಲಾ ಜೊಲ್ಲೆ

ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ನಿಪ್ಪಾಣಿಯಲ್ಲಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ಬೆಳಗಾವಿ ಜಿಲ್ಲೆಯ “ಉದ್ಯೋಗಿನಿ ಯೋಜನೆ”ಯ ಫಲಾನುಭವಿಗಳಿಗೆ, ಒಂದು ದಿನದ ತರಬೇತಿ ಕಾರ್ಯಗಾರಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಬಳಿಕ ಫಲಾನುಭವಿಗಳಿಗೆ ಸಾಲ ಸೌಲಭ್ಯದ ಚೆಕ್ ವಿತರಣೆ ಮಾಡಿದರು. ಈ ವೇಳೆ ಮಾತನಾಡಿದ ಸಚಿವರು, ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವುದು ನಮ್ಮ ಗುರಿಯಾಗಿದೆ. ಈ ಸಲುವಾಗಿ ನಮ್ಮ ಇಲಾಖೆಯ ಹಾಗೂ ಬ್ಯಾಂಕ್ ಗಳ ಸಹಯೋಗದಲ್ಲಿ, ರಾಜ್ಯದೆಲ್ಲೆಡೆ ಈ ಯೋಜನೆಯ ಫಲಾನುಭವಿಗಳಿಗೆ ಒಟ್ಟು 10 ಕೋಟಿ ರೂ. ವಿತರಣೆ ಮಾಡಲಾಗಿದೆ. ಮಹಿಳೆಯರು ಸಮಾಜದಲ್ಲಿ ಸಬಲರಾಗಬೇಕು ಹಾಗೂ ಅವರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡಬೇಕು ಎಂಬ ಕನಸನ್ನು ನನಸಾಗಿಸುವ ಉದ್ದೇಶದಿಂದ ಅವರಿಗೆ ಚೆಕ್ ವಿತರಿಸುವ ಮೂಲಕ ಆರ್ಥಿಕ ಬಲ ತುಂಬಿದರು.

Home add -Advt

ಖಾಸಗಿ ಆರ್ಥಿಕ ಸಂಸ್ಥೆಗಳಿಂದ ಪಡೆಯುವ ಸಾಲಕ್ಕೆ ಹೆಚ್ಚಿನ ಬಡ್ಡಿ ತೆರುವುದನ್ನು ತಪ್ಪಿಸುವುದು ನಮ್ಮ ಉದ್ದೇಶವಾಗಿದೆ. ಈ ಜನಪರ ಯೋಜನೆಯನ್ನು ಸರ್ವ ಫಲಾನುಭವಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಬಸವರಾಜ ವರವಟ್ಟಿ, ಸಿಡಿಪಿಓ ಸುಮಿತ್ರಾ ಡಿ.ಬಿ, ನಗರಸಭೆ ಅಧ್ಯಕ್ಷರಾದ ಜಯವಂತ ಭಾಟಲೆ, ಉಪಾಧ್ಯಕ್ಷರದಾ ನೀತಾ ಬಾಗಡಿ, ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.

Related Articles

Back to top button