Kannada NewsLatest

ಧರ್ಮಸ್ಥಳ ಮಂಜುನಾಥ ದೇವರ ದರ್ಶನ ಪಡೆದ ಸಚಿವೆ ಶಶಿಕಲಾ ಜೊಲ್ಲೆ

ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಮುಜರಾಯಿ, ಹಜ್ ಮತ್ತು ವಕ್ಫ್ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಯವರು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾಡಿನ ಪವಿತ್ರ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥೇಶ್ವರ ದೇವರ ದರ್ಶನ ಪಡೆದು, ಸರ್ವರಿಗೂ ಒಳಿತಾಗಲಿ ಎಂದು ಪ್ರಾರ್ಥಿಸಿದರು.

ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ದಿವ್ಯಾಶೀರ್ವಾದ ಪಡೆದು ಇದೇ ವೇಳೆ ದೇಗುಲದ ಅಭಿವೃದ್ಧಿ ಕಾರ್ಯಗಳ ಕುರಿತು ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಸಚಿವರಾದ ಸಿ.ಸಿ. ಪಾಟೀಲ ಹಾಗೂ ದೇಗುಲದ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
14 ಲಕ್ಷ ರೂ ಮೊತ್ತದಲ್ಲಿ ಹಜರತ್ ಬಾಬಾ ಬಿಲನ್ ಸಾಹೇಬ ದರ್ಗಾದ ದಾಸೋಹದ ಕಟ್ಟಡ ಕಾಮಗಾರಿಗೆ ಜ್ಯೋತಿಪ್ರಸಾದ ಜೊಲ್ಲೆ ಚಾಲನೆ

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button