*ವಿಶೇಷ ಒಲಿಂಪಿಕ್ಸ್ ಭಾರತ ಕರ್ನಾಟಕ ರಾಜ್ಯ ಅಧ್ಯಕ್ಷರಾಗಿ ಶಶಿಕಲಾ ಜೊಲ್ಲೆ ಆಯ್ಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವೆ ಶಶಿಕಲಾ ಜೊಲ್ಲೆ ವಿಶೇಷ ಒಲಿಂಪಿಕ್ಸ್ ಭಾರತ್‌ನ ಕರ್ನಾಟಕದ ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ.
ವಿಶೇಷ ಚೇತನ ಮಕ್ಕಳಿಗೆ ರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಕೂಟವನ್ನು ಹಮ್ಮಿಕೊಳ್ಳುವ ವಿಶೇಷ ಒಲಿಂಪಿಕ್ಸ್ ಭಾರತ್‌ನ ಚುನಾವಣೆ ಬೆಂಗಳೂರಿನಲ್ಲಿ ನಡೆಯಿತು. ಕರ್ನಾಟಕದಿಂದ ಅಧ್ಯಕ್ಷರಾಗಿ ಮಾಜಿ ಸಚಿವೆ, ಶಾಸಕಿ ಶಶಿಕಲಾ ಜೊಲ್ಲೆ, ಉಪಾಧ್ಯಕ್ಷರಾಗಿ ರೂಪಸಿಂಗ್ ಜನರಲ್, ಕಾರ್ಯದರ್ಶಿಯಾಗಿ ಅಮರೇಂದ್ರ ಎ, ಕ್ರೀಡಾ ನಿರ್ದೇಶಕರಾಗಿ ನಾರಾಯಣ ಐ.ಡಿ, ಶಕುಂತಲಾ ಎಸ್. ಭಟ್, ಹಾಲಪ್ಪಎಸ್. ಹಿರೇಮಠ್, ಆಯ್ಕೆಯಾಗಿದ್ದಾರೆ.
ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಪ್ರತಿಕ್ರಿಯಿಸಿರುವ ಶಶಿಕಲಾ ಜೊಲ್ಲೆ, ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾ ನಡ್ಡಾ ಜಿ ಅವರ ನೇತೃತ್ವದಲ್ಲಿ ದೇಶದಲ್ಲಿ ವಿಶೇಷ ಚೇತನ ಮಕ್ಕಳಿಗೆ ಹಲವಾರು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅವರ ನಾಯಕತ್ವದಲ್ಲಿ ಕರ್ನಾಟಕದಾದ್ಯಂತ ವಿಶೇಷ ಚೇತನ ಮಕ್ಕಳಿಗೆ ಅವಕಾಶ ಕಲ್ಪಿಸಿ ವಿಶೇಷ ಒಲಿಂಪಿಕ್ಸ್‌ಗೆ ಅವರನ್ನು ಸಿದ್ಧಗೊಳಿಸುವ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ಮತ್ತು ನೊಂದವರ ವಿಶೇಷ ಮಕ್ಕಳ ಪಾಲಕರಿಗೆ ಧೈರ್ಯ ತುಂಬುವ ಜವಾಬ್ದಾರಿ ನಮ್ಮದಾಗಿದೆ ಎಂದು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ