Kannada NewsLatest

ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಿಸಿದ ಸಚಿವೆ ಶಶಿಕಲಾ ಜೊಲ್ಲೆ

ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ನಿಪ್ಪಾಣಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಸರ್ಕಾರದ ವತಿಯಿಂದ ವಿದ್ಯಾರ್ಥಿಗಳಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಯವರು ಉಚಿತ ಟ್ಯಾಬ್ ವಿತರಣೆ ಮಾಡಿದರು.

ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ ನಿಪ್ಪಾಣಿಯಲ್ಲಿ ಇಲ್ಲಿಯವರೆಗೆ ಸರ್ಕಾರಿ ಪದವಿ ಕಾಲೇಜು ಇರಲಿಲ್ಲ. ಆದರೆ ಪದವಿ ಕಾಲೇಜು ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಿಸಿ, ಗಡಿಭಾಗದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿದ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರಿಗೆ ಧನ್ಯವಾದಗಳು ಎಂದರು.

ದೇಶದ ಅಭಿವೃದ್ಧಿಗೆ ಯುವ ಜನತೆಯ ಪಾತ್ರ ಅಧಿಕವಾಗಿದ್ದು ಸಾಮಾಜಿಕ ಹಾಗೂ ಆರ್ಥಿಕ ಕ್ಷೇತ್ರದ ಮಾಹಿತಿ ಹೋಂದಿರಬೇಕು ತಾವು ಇಷ್ಟಪಟ್ಟ ಗುರಿಯಡೆಗೆ ಸಾಗಬೇಕು. ಪ್ರಸ್ತುತ ಆನ್ ಲೈನ್ ತರಗತಿ ನಡೆಯುತ್ತಿದ್ದು ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಸಾಧನೆಯ ಹಾದಿಯತ್ತ ಹೆಜ್ಜೆ ಹಾಕಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಪ್ರಕಾಶ ಗಾಯಕವಾಡ, ಬಿಇಒ ರೇವತಿ ಮಠದ, ನಗರಸಭೆ ಅಧ್ಯಕ್ಷರು ಜಯವಂತ ಭಾಟಲೆ, ಉಪಾಧ್ಯಕ್ಷರು ನೀತಾ ಬಾಗಡಿ, ಸಭಾಧ್ಯಕ್ಷ ಸದ್ದಾಮ ನಗಾರಜಿ, ಪೌರಾಯುಕ್ತ ಮಹಾವೀರ ಬೋರಣ್ಣವರ, ಮುಖ್ಯಾಧ್ಯಪಕ ಪೋಳ, ರಾಜು ಗುಂದೆಶಾ, ಪ್ರಣವ ಮಾನವಿ, ಬಂಡಾ ಘೋರ್ಪಡೆ, ದೀಪಕ ಮಾನೆ, ನಗರಸಭೆ ಸದಸ್ಯರು, ಸ್ಥಳೀಯ ಮುಖಂಡರು, ವಿದ್ಯಾರ್ಥಿಗಳು, ಶಿಕ್ಷಕರು ಉಪಸ್ಥಿತರಿದ್ದರು.
ಅಕ್ಕೋಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆಸಚಿವೆ ಶಶಿಕಲಾ ಜೊಲ್ಲೆ ಧಿಡೀರ್ ಭೇಟಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button