Belagavi NewsBelgaum NewsKannada NewsKarnataka NewsLatestPolitics

*ಸರ್ಕಾರದ ವಿರುದ್ಧ ಪ್ರತಿಭಟನೆ ಎಚ್ಚರಿಕೆ ನೀಡಿದ ಮಾಜಿ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯ ಸರ್ಕಾರ ದೇವಸ್ಥಾನಗಳ ಅನುದಾನ ಬಿಡುಗಡೆಗೆ ತಡೆ ನೀಡಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಪ್ರತಿಭಟನೆ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶಶಿಕಲಾ ಜೊಲ್ಲೆ, ಭಾರತೀಯ ಸಂಸ್ಕೃತಿಯಲ್ಲಿ ದೇವಸ್ಥಾನಗಳಿಗೆ ಬಹಳಷ್ಟು ಮಹತ್ವ ಇದೆ. ನಮ್ಮ‌ ಸರ್ಕಾರದಲ್ಲಿ ದೇವಸ್ಥಾನಗಳ, ಮಂದಿರಗಳ ಜೀರ್ಣೋದ್ಧಾರಕ್ಕಾಗಿ ಅನುದಾನ ಬಿಡುಗಡೆ ಮಾಡಿದ್ದೆವು. ಚುನಾವಣಾ ನೀತಿ ಸಂಹಿತೆ ಬಂದಿದ್ದ ಕಾರಣ ಎರಡನೇ ಕಂತು ಬಿಡುಗಡೆ ಆಗಿರಲಿಲ್ಲ. ಈಗ ಸರ್ಕಾರ ಅನುದಾನ ತಡೆ ಹಿಡಿದಿರುವುದು ಖಂದನೀಯ ಎಂದರು.

Related Articles

ದೇವಸ್ಥಾನ ಅಂದಾಗ ಯಾವುದೇ ಪಕ್ಷಪಾತ ಅಥವಾ ಬೇರೆ ರೀತಿಯಿಂದ ನೋಡುವ ಕೆಲಸ ಸರ್ಕಾರದಿಂದ ಆಗಬಾರದು. ನಾವು ಮಂಜೂರಾತಿ ಮಾಡಿರುವುದನ್ನು ಬಿಡುಗಡೆ ಮಾಡುವುದು ಸರ್ಕಾರ ಮತ್ತು ಸಚಿವರ ಜವಾಬ್ದಾರಿ. ದೇವಸ್ಥಾನಗಳ ಅನುದಾನಕ್ಕೆ ತಡೆ ನೀಡಿರುವ ಆದೇಶವನ್ನು ಸರ್ಕಾರ ಹಿಂಪಡೆಯಬೇಕು. ರಾಜ್ಯದಲ್ಲಿರುವ ದೇವಾಲಯಗಳ ಜೀರ್ಣೋದ್ಧಾರ ಆಗಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಉಗ್ರವಾದ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Home add -Advt

Related Articles

Back to top button