Latest

*ಶಶಿಕಲಾ ಜೊಲ್ಲೆ ಪುತ್ರನ ಜಮೀನು ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ದಾಖಲು*

ಪ್ರಗತಿವಾಹಿನಿ ಸುದ್ದಿ: ವಕ್ಫ್ ಮಂಡಳಿಯ ಯಡವಟ್ಟು ಹಲವರ ಕೆಂಗಣ್ಣಿಗೆ ಗುರಿಯಾಗಿದೆ. ಈ ಮಧ್ಯೆ ಮಾಜಿ ವಕ್ಫ್ ಸಚಿವೆ, ಬಿಜೆಪಿ ಶಾಸಕಿ ಶಶಿಕಲಾ ಜೊಲ್ಲೆ ಅವರ ಪುತ್ರನ ಜಮೀನು ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ದಾಖಲಾಗಿದೆ.

ಬಿಜೆಪಿ ಶಾಸಕಿ ಶಶಿಕಲಾ ಜೊಲ್ಲೆ ಮತ್ತು ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ದಂಪತಿಯ ಕಿರಿಯ ಪುತ್ರ ಬಸವಪ್ರಭು ಜೊಲ್ಲೆ ಅವರಿಗೆ ಸೇರಿದ 2 ಎಕರೆ 13 ಗುಂಟೆ ಜಮೀನಿನ ಪಹಣಿಯಲ್ಲಿ ವಕ್ಫ್ ಆಸ್ತಿ ಅಂತ ಹೆಸರು ಸೇರ್ಪಡೆಯಾಗಿದೆ. ಯಕ್ಸಂಬಾ ಗ್ರಾಮದಲ್ಲಿ ಸರ್ವೆ ನಂಬರ್ 337ರಲ್ಲಿ ಬಸವಪ್ರಭು ಜೊಲ್ಲೆ ಅವರಿಗೆ ಸೇರಿದ 2 ಎಕರೆ 13 ಗುಂಟೆ ಜಮೀನು ಇದೆ. ಈ ಜಮೀನಿನಲ್ಲಿ ಜೊಲ್ಲೆ ಕುಟುಂಬ ತಲ- ತಲಾಂತರಗಳಿಂದ ಉಳಿಮೆ ಮಾಡುತ್ತಾ ಬಂದಿದೆ. ಆದರೆ, 2021ರಲ್ಲಿ ಶಾಸಕಿ ಶಶಿಕಲಾ ಜೊಲ್ಲೆ ವಕ್ಫ್ ಬೋರ್ಡ್ ಸಚಿವರಾಗಿದ್ದ ಸಮಯದಲ್ಲೇ ತಮ್ಮ ಕಿರಿಯ ಪುತ್ರ ಬಸವಪ್ರಭು ಅವರಿಗೆ ಸೇರಿದ ಜಮೀನು ಪಹಣಿಯಲ್ಲಿ ವಕ್ಫ್ ಆಸ್ತಿ ಅಂತ ನಮೂದಾಗಿದೆ. ವಕ್ಫ್ ಆಸ್ತಿ ಎಂದು ಉಲ್ಲೇಖಿತ ಪಹಣಿ ಪತ್ರ ನೋಡಿ ಬಸವಪ್ರಭು ಜೊಲ್ಲೆ ದಂಗಾಗಿದ್ದಾರೆ.

Related Articles

Home add -Advt

Related Articles

Back to top button