*ಸದನದಲ್ಲಿ ರೈತರ ಪರ ಧ್ವನಿ ಎತ್ತಿದ ಶಾಸಕಿ ಶಶಿಕಲಾ ಜೊಲ್ಲೆ*
ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ರಾಜ್ಯದಲ್ಲಿ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳ ರೈತರ ಕೃಷಿ ಪಂಪಸೆಟ್‍ಗಳಿಗೆ ದಿನವಹಿ 7 ಗಂಟೆಗಳ ಕಾಲ 3 ಫೇಸ್ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ ಹೇಳಿದರು.
ಅವರು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಅವರ ಲೋಡ್ ಶೆಡ್ಡಿಂಗ್ ಹೆಸರಿನಲ್ಲಿ ಸಮರ್ಪಕ ವಿದ್ಯುತ್ ಪೂರೈಸದೆ ಗ್ರಾಮೀಣ ಪ್ರದೇಶಗಳಲ್ಲಿ ರೈತರ ಪಂಪಸೆಟ್‍ಗಳಿಗೆ 3 ಫೇಸ್ ವಿದ್ಯುತ್ ಸರಬುರಾಜು ಸರಿಯಾಗಿ ಆಗದೇ ಇರುವುದರಿಂದ ರೈತರಿಗೆ ತುಂಬಾ ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ ಮಾತನಾಡಿ,ತಾಂತ್ರಿಕ ಸಾಧ್ಯತೆ ಇರುವ ಪ್ರದೇಶಗಳಲ್ಲಿ ಕೃಷಿ ಫೀಡರ್‍ಗಳಿಗೆ ಹಗಲಿನ ವೇಳೆಯಲ್ಲಿ ನಿರಂತರ 7 ಗಂಟೆಗಳ ಕಾಲ 3 ಫೇಸ್ ವಿದ್ಯುತ್ತನ್ನು ಪೂರೈಸಲಾಗುತ್ತಿದೆ ಎಂದರು.
ತಾಂತ್ರಿಕ ಸಾಧ್ಯತೆ ಇಲ್ಲದಿರುವ ಕೆಲವೊಂದು ಪ್ರದೇಶಗಳಲ್ಲಿ ಕೃಷಿ ಪೀಡರ್‍ಗಳಿಗೆ ಪಾಳಿಯಲ್ಲಿ(ಹಗಲಿನ ವೇಳೆಯಲ್ಲಿ 4 ಗಂಟೆಗಳ ಕಾಲ ಹಾಗೂ ರಾತ್ರಿ ವೇಳೆಯಲ್ಲಿ 3 ಗಂಟೆಗಳ ಕಾಲ) ಒಟ್ಟು 7 ಗಂಟೆಗಳ ಕಾಲ 3 ಫೇಸ್ ವಿದ್ಯುತ್ ಸರಬರಾಗು ಮಾಡಲಾಗುತ್ತಿದೆ ಎಂದು ಉತ್ತರಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ