
ಪ್ರಗತಿವಾಹಿನಿ ಸುದ್ದಿ: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಅಂತರಾಷ್ಟ್ರೀಯ ಅಪರಾಧ ನ್ಯಾಯ ಮಂಡಳಿ ಗಲ್ಲುಶಿಕ್ಷೆ ವಿಧಿಸಿದೆ.
2024ರಲ್ಲಿ ಬಾಂಗ್ಲಾ ದೇಶದಲ್ಲಿ ನಡೆದ ಹಿಂಸಾಚಾರಕ್ಕೆ ಅಂದಿನ ಪ್ರಧಾನಿ ಶೇಖ್ ಹಸೀನಾ ಅವರೇ ನೇರ ಕಾರಣರಾಗಿದ್ದು, ವಿದ್ಯಾರ್ಥಿಗಳ ದಂಗೆಯನ್ನು ಹತ್ತಕ್ಕಿಲು ಮಾರಣಾಂತಿಕ ದಾಳಿ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಶೇಖ್ ಹಸೀನಾ ಅಪರಾಧಿಯಾಗಿದ್ದು, ಅವರಿಗೆ ಗಲ್ಲುಶಿಕ್ಷೆ ವಿಧಿಸಲಾಗುವುದು ಎಂದು ಐಸಿಟಿ ತೀರ್ಪು ನೀಡಿದೆ.
ನ್ಯಾಯ ಮಂಡಳಿ 54 ಸಾಕ್ಷ್ಯಗಳನ್ನು ಪರಿಗಣಿಸಿ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದೆ. 2024ರ ಜುಲೈ 15ರಿಂದ ಆಗಸ್ಟ್ 15ರವರೆಗೆ 1400 ಜನರು ಮೃತಪಟ್ಟಿದ್ದಾರೆ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಚೇರಿ ವರದಿ ನೀಡಿದೆ. ಶೇಖ್ ಹಸೀನಾ ಸದ್ಯ ಭಾರತದಲ್ಲಿ ಆಶ್ರಯ ಪಡೆದುಕೊಂಡಿದ್ದು, ಗಲ್ಲುಶಿಕ್ಷೆ ವಿರುದ್ಧ ಮೇಲ್ಮನವಿ ಸಲ್ಲಿಸುವ ಸಾಧ್ಯತೆಗಳಿವೆ.




