ಪ್ರಗತಿವಾಹಿನಿ ಸುದ್ದಿ: ನವೆಂಬರ್ 13ರಂದು ನಡೆಯಲಿರುವ ಶಿಗ್ಗಂವಿ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡಿದೆ. ಮತ್ತೊಮ್ಮೆ ಅಲ್ಪಸಂಖ್ಯಾತ ಸಮುದಾಯದ ನಾಯಕನಿಗೆ ಟಿಕೆಟ್ ಘೋಷಿಸಲಾಗಿದೆ.
ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಯಾಸೀರ್ ಅಹ್ಮದ್ ಅವರಿಗೆ ಟಿಕೆಟ್ ಘೋಷಿಸಲಾಗಿದ್ದು, ಕಾಂಗ್ರೆಸ್ ಟಿಕೆಟ್ ನಿರೀಕ್ಷೆಯಲ್ಲಿದ್ದ ವೈಶಾಲಿ ಕುಲಕರ್ಣಿಗೆ ಟಿಕೆಟ್ ಕೈತಪ್ಪಿದೆ.
ಇನ್ನು ಬಿಜೆಪಿ ಅಭ್ಯರ್ಥಿಯಾಗಿ ಈಗಾಗಲೇ ಭರತ್ ಬೊಮ್ಮಾಯಿ ಕಣದಲ್ಲಿದ್ದು, ಇಂದು ಭರ್ಜರಿ ರೋಡ್ ಶೋ ನಡೆಸುವ ಮೂಲಕ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ