Latest

ಬಿಪಿನ್ ರಾವತ್ ಸಾವು ಸಂಭ್ರಮಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ

ಪ್ರಗತಿವಾಹಿನಿ ಸುದ್ದಿ; ಶಿಗ್ಗಾವಿ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ನಿಧನವನ್ನು ಸಂಭ್ರಮಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ಇಂದು ನಡೆದ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಶಿಗ್ಗಾವಿ ತಾಲೂಕು ಪಂಚಾಯಿತಿ ಕಾರ್ಯಾಲಯದ ಮತಗಟ್ಟೆಗೆ ತೆರಳಿ ಮತಚಲಾಯಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಬಿಪಿನ್ ರಾವತ್ ಅಗಲಿಕೆಯಿಂದ ಇಡೀ ದೇಶವೇ ದು:ಖದಲ್ಲಿದೆ. ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಸಂಭ್ರಮಿಸಿ ಪೋಸ್ಟ್ ಹಾಕಿದ್ದಾರೆ. ಇಂತಹ ಪೋಸ್ಟ್ ಖಂಡನೀಯ. ಬಿಪಿನ್ ರಾವತ್ ಸಾವನ್ನು ಸಂಭ್ರಮಿಸುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಇನ್ನು ಮಹದಾಯಿ ಹೋರಾಟಗಾರರ ಮೇಲಿನ ಕೇಸ್ ರೀ ಓಪನ್ ಮಾಡಿಲ್ಲ, ಕೇಸ್ ವಾಪಸ್ ಪಡೆಯುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಇದೇ ವೇಳೆ ತಿಳಿಸಿದರು.
ವಿಧಾನ ಪರಿಷತ್ ನ 25 ಸ್ಥಾನಕ್ಕೆ ಮತದಾನ ಆರಂಭ

Home add -Advt

Related Articles

Back to top button