ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಬಂಜಾರಾ ಸಮುದಾಯದವರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿ ಉದ್ವಿಗ್ನ ಪರಿಸ್ಥಿತಿಯುಂಟಾಗಿದೆ. ಈ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಶಿಕಾರಿಪುರ ತಾಲೂಕಿನಲ್ಲಿ ಇಂದು ಬಂಜಾರ ಸಮುದಾಯ ಒಳಮೀಸಲಾತಿ ವಿಂಗಡಣೆ ವಿರೋಧಿಸಿ ಪ್ರತಿಭಟನೆಗೆ ಕರೆ ಕೊಟ್ಟಿತ್ತು.ಪ್ರತಿಭಟನಾ ಮೆರವಣಿಗೆ ವೇಳೆ ಉದ್ರಿಕ್ತರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸದ ಮೇಲೆ ಕಲ್ಲುತೂರಾಟ ನಡೆಸಿದ್ದು, ಕಿಟಕಿ ಗಾಜುಗಳನ್ನು ಪುಡಿಗೈದಿದ್ದಾರೆ. ಅಲ್ಲದೇ ಬಿಜೆಪಿ ಬ್ಯಾನರ್ ಗಳನ್ನು ಹರಿದು ಹಾಕಿ, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನಾಕಾರರನ್ನು ನಿಯಂತ್ರಿಸಲು ಬಂದ ಪೊಲೀಸರ ಮೇಲೂ ಕಲ್ಲು ತೂರಾಟ ನಡೆದಿದ್ದು, ಪ್ರತಿಭಟನೆ ಹಿಂಚಾರಕ್ಕೆ ತಿರುಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಪ್ರಹಾರ ನಡೆಸಿದ್ದಾರೆ.
ಮುಂಜಾಗೃತಾ ಕ್ರಮವಾಗಿ ಶಿಕಾರಿಪುರದಾದ್ಯಂತ 144 ಸೆಕ್ಷಣ್ ಅಡಿಯಲ್ಲಿ ತಹಶೀಲ್ದಾರ್ ವಿಶ್ವನಾಥ್ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಶಿಕಾರಿಪುರ ತಾಲೂಕಿನಾದ್ಯಂತ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ