*ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಪಬ್ ಮೇಲೆ IT ದಾಳಿ*

ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನಲ್ಲಿರುವ ಅತ್ಯಂತ ದುಬಾರಿ ಪಬ್ ಮೇಲೆ ಆದಾಯ ತೆರಿಗೆ ಇಲಾಖೆ( IT) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಚರ್ಚ್ ಸ್ಟ್ರೀಟ್ ನಲ್ಲಿರುವ ಬ್ಯಾಸ್ಟಿಯನ್ ಪಬ್ ಮೇಲೆ ತೆರಿಗೆ ಇಲಾಖೆ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಯಾವ ಕಾರಣಕ್ಕಾಗಿ ಈ ದಾಳಿ ನಡೆದಿದೆ ಎಂಬುದು ತಿಳಿದುಬಂದಿಲ್ಲ. ಬ್ಯಾಸ್ಟಿಯನ್ ಪಬ್ ರಾಜ್ಯ ರಾಜಧಾನಿ ಬೆಂಗಳೂರಿನ ಅತ್ಯಂತ ದುಬಾರಿ ಪಬ್ ಆಗಿದ್ದು, ನಟಿ ಶಿಲ್ಪಾ ಶೆಟ್ಟಿ ಒಡೆತನದ … Continue reading *ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಪಬ್ ಮೇಲೆ IT ದಾಳಿ*