ಶಿವಮೊಗ್ಗ ಸುಬ್ಬಣ್ಣ ಇನ್ನಿಲ್ಲ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕಾಡುಕುದುರೆ ಓಡಿ ಬಂದಿತ್ತಾ…. ಖ್ಯಾತಿಯ ಜನಪ್ರಿಯ ಗಾಯಕ ಶಿವಮೊಗ್ಗ ಸುಬ್ಬಣ್ಣ ಗುರುವಾರ ರಾತ್ರಿ ನಿಧನರಾದರು. ಅವರಿಗೆ 83 ವರ್ಷ ವಯಸ್ಸಾಗಿತ್ತು.

ಗುರುವಾರ ಸಂಜೆ ಹೃದಯಾಘಾತವಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಬನಶಂಕರಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.

Home add -Advt

ಕಾಡುಕುದುರೆ ಚಲನಚಿತ್ರದ ಕಾಡುಕುದುರೆ ಓಡಿ ಬಂದಿತ್ತಾ ಹಾಡಿಗೆ ಅವರಿಗೆ ರಾಷ್ಟ್ರ ಪ್ರಶಸ್ತ್ರಿ ಲಭಿಸಿತ್ತು. ಕುವೆಂಪು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪಡೆದಿದ್ದ ಅವರು ಅನೇಕ ಹಾಡುಗಳಿಗೆ ಸಂಗೀತ ನೀಡಿದ್ದರು.

ಹಿನ್ನೆಲೆ ಗಾಯನಕ್ಕಾಗಿ ರಾಷ್ಟ್ರಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಸಂಗೀತ ನೃತ್ಯ ಅಕಾಡಮಿ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಅವರು ಪಡೆದಿದ್ದರು.

https://pragati.taskdun.com/latest/bollywood-actress-urvashiroutela-interview-egiption-singer-propose/

https://pragati.taskdun.com/film-and-entertainment/vikranth-ronamovie-releasechikkamagaloreclash/

https://pragati.taskdun.com/latest/protest-camp-people-traffic-hazard-control-stiudents-life-save-police/

Related Articles

Back to top button