*ಕೆ.ಎಸ್.ಆರ್.ಟಿ.ಸಿ ಬಸ್-ಕಾರು ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ರಾಜಹಂಸ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಶಿರಾಡಿಘಾಟ್ ನಲ್ಲಿ ಈ ದುರಂತ ಸಂಭವಿಸಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು. ಸಕಲೇಶಪುರಕ್ಕೆ ಮದುವೆಗೆ ಹೋಗಿ ವಾಪಸ್ ಆಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಉಜಿರೆ ನಿವಾಸಿಗಳಾದ ಶ್ರೀಧರ ಮರಕಡ, ಜನಾರ್ದನ ಕೆರಿಮಾರ್ ಹಾಗೂ ಕೊಕ್ಕಡ ನಿವಾಸಿ ಚಂದ್ರಶೇಖರಗೌಡ ಮೃತ ದುರ್ದೈವಿಗಳು. ಘಟನಾ … Continue reading *ಕೆ.ಎಸ್.ಆರ್.ಟಿ.ಸಿ ಬಸ್-ಕಾರು ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು*