Latest

ನಿರ್ದೇಶಕ ಸೇರಿ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಪ್ರಗತಿವಾಹಿನಿ ಸುದ್ದಿ; ರಾಮನಗರ: ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ನಿರ್ದೇಶಕ ಸೇರಿ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಸಿನಿಮಾ ಶೂಟಿಂಗ್ ವೇಳೆ ಫೈಟರ್ ವಿವೇಕ್ ಸಾವು ಪ್ರಕರಣ ಸಂಬಂಧ ನಿರ್ದೇಶಕ ಶಂಕರಯ್ಯ, ಸಾಹಸ ನಿರ್ದೇಶಕ ವಿನೋದ್ ಹಾಗೂ ಕ್ರೇನ್ ಆಪರೇಟರ್ ಮಹದೇವ್ ಅವರನ್ನು ಬಿಡದಿ ಪೊಲೀಸರು ಬಂಧಿಸಿದ್ದರು. ಇಂದು ಮೂವರು ಆರೋಪಿಗಳನ್ನು ರಾಮನಗರ ಸಿಟಿ ಸಿವಿಲ್ ಕೋರ್ಟ್ ಗೆ ಹಾಜರು ಪಡಿಸಿದ್ದರು.

Home add -Advt

ಈ ವೇಳೆ ಜಡ್ಜ್ ಅನುಪಮಾ ಲಕ್ಷ್ಮೀ ಮೂವರು ಆರೋಪಿಗಳಿಗೆ ಆಗಸ್ಟ್.24ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.
ನಿರ್ಮಾಪಕ ನಾಪತ್ತೆ

Related Articles

Back to top button