
ಪ್ರಗತಿವಾಹಿನಿ ಸುದ್ದಿ; ಶಿರೋಡ: ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಯುವವೈದ್ಯೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸಿಂಧುದುರ್ಗದ ಶಿರೋಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
38 ವರ್ಷದ ಡಾ.ಅಕ್ಷಯಾ ಪವಾಸ್ಕರ್ ಮೃತ ವೈದ್ಯೆ. ಕರ್ತವ್ಯ ನಿರತ ಯುವವೈದ್ಯೆ ಸಾವಿಗೆ ತೀವ್ರ ಸಂತಾಪ ಸೂಚಿಸಿರುವ ಆರೋಗ್ಯ ಸಚಿವ ವಿಶ್ವಜಿತ್ ರಾಣೆ, ಕೋವಿಡ್ ಸಂದರ್ಭದಲ್ಲಿ ಡಾ.ಅಕ್ಷಯಾ ಕಠಿಣ ಪರಿಶ್ರಮದಿಂದ, ನಿಷ್ಠೆಯಿಂದ ಕಾರ್ಯನಿರ್ವಹಿಸಿದ್ದರು. ಅವರ ಸಾವು ಆಘಾತ ತಂದಿದೆ. ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.
ಅಲ್ಲದೇ ಡಾ.ಅಕ್ಷಯಾ ಸಾವಿಗೆ ಕಾರಣವೇನು ಎಂದು ತನಿಖೆ ನಡೆಸಲಾಗುವುದು ಎಂದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ