ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಗುಡ್ಡ ಕುಸಿತ ಸಂಭವಿಸಿದ್ದು, ಅನೇಕ ಕಡೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.
ಧಾರಾಕಾರ ಮಳೆಯಿಂದಾಗಿ ರಾಗಿಹೊಸಳ್ಳಿ ಬಳಿ ಗುಡ್ಡ ಕುಸಿದು ಬಿದ್ದಿರುವ ಪರಿಣಾಮ ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ ಆಗಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗದ ಸಂಪರ್ಕ ಕಡಿತಗೊಂಡಿದೆ.
ಕರಾವಳಿ ಭಾಗಕ್ಕೆ ತೆರಳು ಹಾಗೂ ಅಲ್ಲಿಂದ ಮಲೆನಾಡು ಭಾಗಕ್ಕೆ ಹೋಗಲು ಯಲ್ಲಾಪುರ-ಅಂಕೋಲಾ ರಸ್ತೆ ಅಥವಾ ಶಿರಸಿ-ಯಾಣ-ಕುಮಟಾ ರಸ್ತೆಯನ್ನು ಬಳಸಲು ಜಿಲ್ಲಾಡಳಿತ ಸೂಚನೆ ನೀಡಿದೆ.
ದೇವಿಮನೆ ಘಟ್ಟದಲ್ಲಿ ರಸ್ತೆ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಪರಿಣಾಮ ಇದೇ ರೀತಿ ಮಳೆ ಮುಂದುವರಿದರೆ ಇನ್ನೂ ಹಲವೆಡೆ ಭೂಕುಸಿತವುಂಟಾಗುವ ಆತಂಕ ಎದುರಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ