*ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿ ಬಂದ್*

ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಗುಡ್ಡ ಕುಸಿತ ಸಂಭವಿಸಿದ್ದು, ಅನೇಕ ಕಡೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಧಾರಾಕಾರ ಮಳೆಯಿಂದಾಗಿ ರಾಗಿಹೊಸಳ್ಳಿ ಬಳಿ ಗುಡ್ಡ ಕುಸಿದು ಬಿದ್ದಿರುವ ಪರಿಣಾಮ ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ ಆಗಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗದ ಸಂಪರ್ಕ ಕಡಿತಗೊಂಡಿದೆ. ಕರಾವಳಿ ಭಾಗಕ್ಕೆ ತೆರಳು ಹಾಗೂ ಅಲ್ಲಿಂದ ಮಲೆನಾಡು ಭಾಗಕ್ಕೆ ಹೋಗಲು ಯಲ್ಲಾಪುರ-ಅಂಕೋಲಾ ರಸ್ತೆ ಅಥವಾ ಶಿರಸಿ-ಯಾಣ-ಕುಮಟಾ ರಸ್ತೆಯನ್ನು ಬಳಸಲು ಜಿಲ್ಲಾಡಳಿತ ಸೂಚನೆ … Continue reading *ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿ ಬಂದ್*