Karnataka NewsLatest

*ಶಿರೂರು ಗುಡ್ಡ ಕುಸಿತ: ಮತ್ತೆ ಶೋಧಕಾರ್ಯಾಚರಣೆಗೆ ಮುಂದಾದ ಜಿಲ್ಲಾಡಳಿತ*

ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ಸಂಭವಿಸಿದ್ದ ಗುಡ್ಡ ಕುಸಿತ ಪ್ರಕರಣದಲ್ಲಿ ಸಾವನ್ನಪ್ಪಿದ ಮೃತದೇಹಗಳಿಗಾಗಿ ಜಿಲ್ಲಾಡಳಿತ ಮತ್ತೆ ಶೋಧ ಕಾರ್ಯಾಚರಣೆ ನಡೆಸಲು ಮುಂದಾಗಿದೆ.

ಜುಲೈ 16ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಸಂಭವಿಸಿತ್ತು. ಘಟನೆಯಲ್ಲಿ 11 ಜನರು ಸಾವನ್ನಪ್ಪಿದ್ದರು. ಅವರಲ್ಲಿ 8 ಜನರ ಮೃತದೇಹ ಪತ್ತೆಯಾಗಿತ್ತು. ಕೇರಳ ಮೂಲದ ಲಾರಿ ಚಾಲಕ ಅರ್ಜುನ್, ಶಿರೂರಿನ ಜಗನ್ನಾಥ್, ಗಂಗೇಕೊಳ್ಳದ ಲೋಕೇಶ್ ಮೃತದೇಹಗಳು ಪತ್ತೆಯಾಗಿಲ್ಲ. ಹಲವು ಬಾರಿ ಶೋಧ ಕಾರ್ಯಾಚರಣೆ ನಡೆಸಿದ್ದರೂ ಮಳೆಯಿಂದಾಗಿ ಅಡ್ಡಿಯಾಗಿತ್ತು. ಅಲ್ಲದೇ ಹಾಗೂ ಗಂಗಾವಳಿ ನದಿಯಲ್ಲಿ ನೀರಿನ ಅಬ್ಬರದಿಂದಾಗಿ ಪ್ರಯತ್ನ ವಿಫಲವಾಗಿತ್ತು.

ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತೆ ಶೋಧ ಕಾರ್ಯಕ್ಕೆ ಮುಂದಾಗಿದೆ. ಗೋವಾದ ಅಭಿಷೇನಿಯ ಓಷನ್ ಸರ್ವಿಸಸ್ ಕಂಪನಿಗೆ 90 ಲಕ್ಷ ಟೆಂಡರ್ ನೀಡಿ ಕಾರವಾರಕ್ಕೆ ಡ್ರಜ್ಜಿಗ್ ಬೋಟ್ ತರಿಸಿದ್ದು, ಶುಕ್ರವಾರದಿಂದ ಕಾರ್ಯಾಚರಣೆ ಆರಂಭವಾಗಲಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button