
ಪ್ರಗತಿವಾಹಿನಿ ಸುದ್ದಿ: ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾಗಿರುವವರಿಗಾಗಿ ಕಳೆದ 13 ದಿನಗಳಿಂದ ನಡೆಸುತ್ತಿದ್ದ ನಿರಂತರ ಶೋಧ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಜುಲೈ 16ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಸಂಭವಿಸಿತ್ತು. ದುರಂತದಲ್ಲಿ 12 ಜನರು ನಾಪತ್ತೆಯಾಗಿದ್ದರು. ಅವರಲ್ಲಿ ಈವರೆಗೆ 8 ಜನರ ಮೃತದೇಹ ಪತ್ತೆಯಾಗಿದೆ. ಉಳಿದ ಮೂವರ ಪತ್ತೆಗಾಗಿ ಹಾಗೂ ಕೇರಳ ಮೂಲದ ಲಾರಿ ಪತ್ತೆಗಾಗಿ ನಿರಂತರವಾಗಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ ಈವರೆಗೂ ಮೂವರ ಸಣ್ಣ ಸುಳಿವು ಸಿಕ್ಕಿಲ್ಲ.
ಗುಡ್ಡ ಕುಸಿತವಾಗಿದ್ದ ಮಣ್ಣುಗಳನ್ನು ತೆರವುಗೊಳಿಸಲಾಗಿದೆ ಅವಶೇಷಗಳಡಿಯಲ್ಲಿಯೂ ಮೂವರು ಪತ್ತೆಯಾಗಿಲ್ಲ. ಗಂಗಾವಳಿ ನದಿಯಲ್ಲಿಯೂ ಪತ್ತೆಯಾಗಿಲ್ಲ. ಸೇನೆ, ನೌಕಾಪಡೆ, ನಿವೃತ್ತ ಸೇನಾಧಿಕಾರಿಗಳು ಸೂಚಿಸಿದ ಜಾಗದಲ್ಲಿ ಕೂಡ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಅಲ್ಲಿಯೂ ಮೂವರ ಬಗ್ಗೆ ಸುಳಿವು ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಕಳೆದ 13 ದಿನಗಳಿಂದ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ