Politics

*ಮಳೆ ಅನಾಹುತ: ನಾಳೆ ಅಂಕೋಲಾಗೆ ಸಿಎಂ ಭೇಟಿ*

ಪ್ರಗತಿವಾಹಿನಿ ಸುದ್ದಿ: ಅಜೀಂ ಪ್ರೇಮ್ ಜಿ ಪ್ರತಿಷ್ಠಾನದೊಂದಿಗೆ ಮಾಡಿಕೊಂಡಿರುವ ಒಪ್ಪಂದದಲ್ಲಿ ವಾರದ ನಾಲ್ಕು ದಿನಗಳು ಸರ್ಕಾರಿ ಶಾಲೆಗಳು ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಿಗೆ ಮೊಟ್ಟೆಯನ್ನು ಸರಬರಾಜು ಮಾಡಲು ಒಪ್ಪಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಈ ಕಾರ್ಯಕ್ರಮವನ್ನು ಇಂದು ಉದ್ಘಾಟಿಸಿದ್ದು, ಮಕ್ಕಳು ಆರೋಗ್ಯವಂತರಾಗಿರಲು ಪೌಷ್ಟಿಕ ಆಹಾರ ಅಗತ್ಯ ಎಂದರು.

ನಾಳೆ ಅಂಕೋಲಾಕ್ಕೆ ಭೇಟಿ

Home add -Advt

ಮಳೆಯಿಂದ ರಸ್ತೆ, ಮನೆ ಬಿದ್ದಿರುವುದು ಹಾಗೂ ಬೆಳೆ ಹಾನಿಯಾಗಿರುವುದಕ್ಕೆ ಪರಿಹಾರ ಕಾರ್ಯಗಳನ್ನು ತುರ್ತಾಗಿ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ ಎಂದ ಮುಖ್ಯಮಂತ್ರಿಗಳು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾಗೆ ನಾಳೆ ಭೇಟಿ ನೀಡಲಿದ್ದೇನೆ. ಗುಡ್ಡ ಕುಸಿತ, ಮಳೆ ಹಾನಿ ಬಗ್ಗೆ ಪರಿಶೀಲನೆ ನಡೆಸುತ್ತೇನೆ ಎಂದು ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button