ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿಯಲ್ಲಿ ಮತ್ತೆ ರಾಜಕೀಯ ಶುರುಮಾಡಲು ಹವಣಿಸುತ್ತಿರುವ ಶಿವಸೇನೆ – ಎಂಇಎಸ್ ಇದೀಗ ಮರಾಠಾ ಭಾಷಿಕ ಕೊರೋನಾ ಸೋಂಕಿತರಿಗಾಗಿ ಆಕ್ಸಿಜನ್ ಪೂರೈಕೆ ಆರಂಭಿಸಿದೆ.
ಮಹಾರಾಷ್ಟ್ರ ಗಡಿ ಸಮನ್ವಯ ಸಚಿವ ಏಕನಾಥ ಶಿಂಧೆ ಬೆಳಗಾವಿ ಮರಾಠಿಗರಿಗಾಗಿ 2 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಪೂರೈಸಿದ್ದು, ಇನ್ನೂ 8 ಪೂರೈಸುವುದಾಗಿ ತಿಳಿಸಿದ್ದಾರೆ ಎಂದು ಎಂಇಎಸ್ ಮುಖಂಡ ಶುಭಂ ಶೇಳಕೆ ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲಾಡಳಿತ ಇಲ್ಲಿಯ ಎನ್ ಜಿ ಓ ಗಳಿಗೆ ಆಕ್ಸಿಜನ್ ಪೂರೈಕೆ ಸ್ಥಗಿತಗೊಳಿಸಿದ್ದರಿಂದ ಸಮಸ್ಯೆಯಾಗಿದೆ. ಹಾಗಾಗಿ ಮಹಾರಾಷ್ಟ್ರದ ನೆರವು ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ.
ಶುಭಂ ಶೇಳಕೆ ಕಳೆದ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಿ 1.24 ಲಕ್ಷದಷ್ಟು ಮತಗಳನ್ನು ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಬರಲಿರುವ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಮೇಲೆ ಶಿವಸೇನೆ – ಎಂಇಎಸ್ ಮೈತ್ರಿಕೂಟ ಕಣ್ಣಿಟ್ಟಿದೆ. ಹಾಗಾಗಿ ಇದೀಗ ಮರಾಠಿ ಭಾಷಿಕರಿಗೆ ಆಕ್ಸಿಜನ್ ಪೂರೈಸುವ ಮೂಲಕ ಅನುಕಂಪ ಗಿಟ್ಟಿಸಲು ಮುಂದಾಗಿದೆ.
ಈಗಾಗಲೆ ಮರಾಠಿ ಭಾಷಿಕರು ಹೆಚ್ಚಾಗಿರುವ ಖಾಸಗಿ ಕೊರೋನಾ ಕೇರ್ ಸೆಂಟರ್ ಗಳಲ್ಲಿ ಆಕ್ಸಿಜನ್ ಪೂರೈಸಲು ನಿರ್ಧರಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ