National

*ಕಾಮಿಡಿಯನ್ ಕುನಾಲ್ ಕಾರ್ಯಕ್ರಮದ ಸ್ಥಳವನ್ನೇ ಧ್ವಂಸ ಮಾಡಿದ ಶಿವಸೇನಾ ಕಾರ್ಯಕರ್ತರು*

ಪ್ರಗತಿವಾಹಿನಿ ಸುದ್ದಿ: ಸ್ಟಾಂಡ್ ಅಪ್ ಕಾಮಿಡಿ ಮಾಡು  ವೇಳೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಗೆ ಅಪಹಾಸ್ಯ ಮಾಡಿದ್ದಕ್ಕೆ ಸ್ಟಾಂಡ್ ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ಅವರ ಕಾರ್ಯಕ್ರಮದ ಸ್ಥಳವನ್ನೇ ಶಿವಸೇನಾ ಕಾರ್ಯಕರ್ತರು ಧ್ವಂಸ ಮಾಡಿರುವ ಘಟನೆ ನಡೆದಿದೆ.

ಮುಂಬೈನ ಖಾರ್‌ನಲ್ಲಿರುವ ಹೋಟೆಲ್‌ನಲ್ಲಿ ನಡೆದ ಕುನಾಲ್ ಕಮ್ರಾ ಅವರ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಯನ್ನು ಅಪಹಾಸ್ಯ ಮಾಡಲಾಗಿದೆ. ಮಾತ್ರವಲ್ಲದೇ ಅವರನ್ನು “ದೇಶದ್ರೋಹಿ” (ಗದ್ದ‌ರ್) ಎಂದು ಉಲ್ಲೇಖಿಸಿ ಭಾರೀ ವಿವಾದಕ್ಕೆ ಕಾರಣರಾಗಿದ್ದಾರೆ.

ಕುನಾಲ್ ಕಮ್ರಾ ಅವರ ಹೇಳಿಕೆಗಳಿಂದ ಶಿವಸೇನೆ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿ “ದಿ ಯುನಿಕಾಂಟಿನೆಂಟಲ್ ಮುಂಬೈ” ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ. ಕುನಾಲ್ ಕಮ್ರಾ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

https://pragativahini.com/kle-institute-law-collegeprabhakara

Home add -Advt

Related Articles

Back to top button