*ಟ್ರೆಕ್ಕಿಂಗ್ ಗೆ ತೆರಳಿದ್ದ ಯುವಕ ನಾಪತ್ತೆ*

ಪ್ರಗತಿವಾಹಿನಿ ಸುದ್ದಿ: ಟ್ರೆಕ್ಕಿಂಗ್ ಗೆ ತೆರಳಿದ್ದ ಯುವಕನೊಬ್ಬ ಏಕಾಏಕಿ ನಾಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಶಿವಗಂಗೆ ಬೆಟ್ಟದಲ್ಲಿ ನಡೆದಿದೆ. 31 ವರ್ಷದ ಅದ್ವೈತ್ ನಾಪತ್ತೆಯಾಗಿರುವ ಯುವಕ. ಬೆಂಗಳೂರಿನ ವೈಟ್ ಫೀಲ್ಡ್ ನಿಂದ ಬೈಕ್ ಬಾಡಿಗೆ ಪಡೆದು ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್ ಗೆ ಬಂದಿದ್ದ ಯುವಕ ನಿನ್ನೆ ಬೆಟ್ಟದ ಬಳಿ ಬೈಕ್ ಪಾರ್ಕಿಂಗ್ ಮಾಡಿ ಬೆಟ್ಟ ಹತ್ತಿದ್ದಾನೆ. ಯುವಕ ಬೆಟ್ಟ ಹತ್ತುತ್ತಿರುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಬೆಟ್ಟ ಹತ್ತಿರುವ ಯುವಕ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದು, ಯಾವುದೇ ಸಂಪರ್ಕಕ್ಕೆ … Continue reading *ಟ್ರೆಕ್ಕಿಂಗ್ ಗೆ ತೆರಳಿದ್ದ ಯುವಕ ನಾಪತ್ತೆ*