Kannada NewsKarnataka NewsLatest

*ಇದ್ದಕ್ಕಿದ್ದಂತೆ ಕುಸಿದು ಬಿದ್ದ ನರ್ಸರಿ ಶಾಲಾ ಕಟ್ಟಡ; ತಪ್ಪಿದ ಭಾರಿ ಅನಾಹುತ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನರ್ಸರಿ ಶಾಲಾ ಕಟ್ಟಡ ಏಕಾಏಕಿ ಕುಸಿದುಬಿದ್ದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಅದೃಷ್ಟವಶಾತ್ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.

ಶಿವಾಜಿನಗರದ ಕುಕ್ಸ್ ರೋಡ್ ನ ಬಿ ಕ್ರಾಸ್ ನಲ್ಲಿರುವ ಬಿಬಿಎಂಪಿ ನರ್ಸರಿ ಶಾಲಾ ಕಟ್ಟಡ ಇಂದು ಮುಂಜಾನೆ ಕುಸಿದು ಬಿದ್ದಿದೆ. ಅವಶೇಷಗಳಡಿ ಹಲವಾರು ವಾಹನಗಳು ಸಿಲುಕಿ ಜಖಂಗೊಂಡಿವೆ.

Home add -Advt

ಬೆಳಗಿನ ಜಾವ ಈ ಘಟನೆ ನಡೆದಿದ್ದರಿಂದ ಮಕ್ಕಳು ಇನ್ನೂ ಶಾಲೆಗೆ ಬಂದಿರಲಿಲ್ಲ. ಹಾಗಾಗಿ ಅದೃಷ್ಟವಾಶಾತ್ ಮಕ್ಕಳು ದುರಂತದಿಂದ ಪಾರಾಗಿದ್ದಾರೆ.

ಕಟ್ಟಡ ಕುಸಿತಗೊಂಡಿರುವ ನರ್ಸರಿ ಶಾಲೆಯಲ್ಲಿ ಸುಮಾರು 80ಕ್ಕೂ ಹೆಚ್ಚು ಮಕ್ಕಳು ಪ್ರವೇಶ ಪಡೆದಿದ್ದರು. ಸ್ಥಳಕ್ಕೆ ಧಾವಿಸಿರುವ ಪೊಲೀಸರು, ಬಿಬಿಎಂಪಿ ಅಧಿಕಾರಿಗಳು ಜೆಸಿಬಿ ಮೂಲಕ ಕಟ್ಟಡಗಳ ಅವಶೇಷ ತೆರವು ಕಾರ್ಯಾಚರಣೆ ನಡೆಸಿದ್ದಾರೆ.


Related Articles

Back to top button