Latest

ಮನೆ ಗೋಡೆ ಕುಸಿತ; ಅಪಾಯದಿಂದ ಪಾರಾದ 5 ತಿಂಗಳ ಮಗು

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಭಾರೀ ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ 5 ತಿಂಗಳ ಮಗುವೊಂದು ಅಪಾಯದಿಂದ ಪಾರಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ಇಲ್ಲಿನ ತ್ರಿಮೂರ್ತಿ ನಗರದಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು ಬಿದ್ದಿದ್ದೆ. 5 ತಿಂಗಳ ಮಗು ಸೇರಿದಂತೆ ಮನೆಯಲ್ಲಿದ್ದ ಕುಟುಂಬ ಸದಸ್ಯರು ಅಪಾಯದಿಂದ ಪಾರಾಗಿದ್ದಾರೆ.

ಮನೆಯ ಒಂದು ಭಾಗದ ಗೋಡೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಮನೆಯಲ್ಲಿ ಇದ್ದ ಟಿವಿ, ಸೇರಿದಂತೆ ಇತರೆ ವಸ್ತುಗಳು ಜಖಂಗೊಡಿವೆ. ಘಟನೆ ವೇಳೆ ಮನೆಯಲ್ಲಿ ಮಗು ಸೇರಿದಂತೆ 6 ಜನರು ಇದ್ದರು. ಸಧ್ಯ ಯಾರೊಬ್ಬರಿಗೂ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದುಬಂದಿದೆ.

ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಗೋಡೆ ಕುಸಿದ ಮನೆಯಲ್ಲೇ ಕುಟುಂಬದವರು ವಾಸ ಮಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button