
ಪ್ರಗತಿವಾಹಿನಿ ಸುದ್ದಿ: ಬೆಳ್ಳಂಬೆಳಿಗ್ಗೆ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ನವದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಬಾಬು (30) ಹಾಗೂ ಸಾವಿತ್ರಿ (26) ಮೃತ ದಂಪತಿ. ಮೃತರು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಮೂಲದವರು.
ಎಂದಿನಂತೆ ಹೋಟೆಲ್ ಕೆಲಸ ಮುಗಿಸಿ ಬೆಳಿಗ್ಗೆ ಊರಿಗೆ ತೆರಳುತ್ತಿದ್ದರು. ಈ ವೇಳೆ ಬೈಕ್ ಗೆ ಲಾರಿ ಡಿಕ್ಕಿಯಾಗಿದ್ದು, ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




