Latest

*ಶಿವಮೊಗ್ಗ ಏರ್ ಪೋರ್ಟ್ ಗೆ ಯಡಿಯೂರಪ್ಪ ಸೂಚಿಸಿದ್ದು ಯಾರ ಹೆಸರು ಗೊತ್ತೇ?*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರಿಡಲಾಗುವುದು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಫೆಬ್ರವರಿ 27ರಂದು ಶಿವಮೊಗ್ಗ ಏರ್ ಪೋರ್ಟ್ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ವಿಮಾನ ನಿಲ್ದಾಣಕ್ಕೆ ದೇಶದ ಶ್ರೇಷ್ಠ ಕವಿ, ಜ್ಞಾನಪೀಠ ಪುರಸ್ಕೃತ, ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಇಡಲು ನಿರ್ಧರಿಸಲಾಗಿದೆ ಎಂದರು.

ಈ ಬಗ್ಗೆ ನಾಳೆ ನಡೆಯಲಿರುವ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇನೆ. ಅಲ್ಲಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಪ್ರಧಾನಿ ಮೋದಿಯವರೇ ಕುವೆಂಪು ಹೆಸರು ಘೋಷಿಸಲಿ ಎಂಬುದು ನನ್ನ ಅಪೇಕ್ಷೆ ಎಂದು ಹೇಳಿದರು.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೆಸರಿಡುವ ಬಗ್ಗೆ ಚರ್ಚೆಗಳು ನಡೆದಿದ್ದವು. ಯಡಿಯೂರಪ್ಪ ಹೆಸರಿಡಬೇಕು ಎಂದು ಹಲವರು ಒತ್ತಾಯಿಸಿದ್ದರು. ಆದರೆ ಇದೀಗ ಶಿವಮೊಗ್ಗ ಏರ್ ಪೋರ್ಟ್ ಗೆ ರಾಷ್ಟ್ರಕವಿ ಕುವೆಂಪು ಹೆಸರಿಡಲಾಗುವುದು ಎಂದು ಯಡಿಯೂರಪ್ಪನವರೇ ಸ್ಪಷ್ಟ ಪಡಿಸಿದ್ದಾರೆ.

Home add -Advt

*13 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ*

https://pragati.taskdun.com/13-new-governorappointpresident/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button