
ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಹಾಡಹಗಲೇ ದರೋಡೆ, ಕಳ್ಲತನ ಪ್ರಕರಣಗಳು ಹೆಚ್ಚುತ್ತಿವೆ. ಮಹಿಳಾ ಎ ಎಸ್ ಐ ಓರ್ವರ ಮಾಂಗಲ್ಯಸರವನ್ನೇ ಕದ್ದು ಕಳ್ಳರು ಪರಾರಿಯಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಎ ಎಸ್ ಐ ಅಮೃತಾಬಾಯಿ ಅವರ 60 ಗ್ರಾಂ ಮಾಂಗಲ್ಯ ಸರವನ್ನು ಕಿತ್ತು ಕಳ್ಳಾರು ಎಸ್ಕೇಪ್ ಆಗಿದ್ದಾರೆ. ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯ ಕತ್ತಿನಲ್ಲಿದ್ದ ಚಿನ್ನದ ಮಾಂಗಲ್ಯಸರವನ್ನೇ ಕಳ್ಳರು ಎಗರಿಸಿದ್ದಾರೆ.
ಶಿವಮೊಗ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ನಡೆಯುತ್ತಿದ್ದು, ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಭದ್ರತೆಗಾಗಿ ಎಸ್ ಎಸ್ ಐ ಅಮೃತಾಬಾಯಿ ಕೂಡ ನಿಯೋಜನೆಗೊಂಡಿದ್ದರು. ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ವೇಳೆ ಎ ಎಸ್ ಐ ಕತ್ತಿನಲ್ಲಿದ್ದ ಮಾಂಗಲ್ಯ ಸರವನ್ನು ಕಳ್ಳರು ಕದ್ದು ಎಸ್ಕೇಪ್ ಆಗಿದ್ದಾರೆ. ಕಳ್ಳರಿಗೆ ಪೊಲೀಸರು ಎಂಬ ಭಯವೂ ಇಲ್ಲದಂತಾಗಿದೆ.




