ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಶಿವಮೊಗ್ಗದಲ್ಲಿ ಅಕ್ರಮ ಗಣಿಗಾರಿಕೆಗೆ ಲಾರಿಯಲ್ಲಿ ತಂದಿದ್ದ ಜಿಲೆಟಿನ್ ಸ್ಫೋಟ ಪ್ರಕರಣದಲ್ಲಿ 8 ಕಾರ್ಮಿಕರು ಸಾವನ್ನಪ್ಪಿದ್ದು, ಘಟನೆಗೆ ಪ್ರಧಾನಿ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಘಟನೆಯಲ್ಲಿ ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ. ಘಟನೆಯಿಂದ ಹಾನಿಯಾದವರಿಗೆ ರಾಜ್ಯ ಸರ್ಕಾರ ಸಾಧ್ಯವಾದಷ್ಟು ನೆರವು ನೀಡಲಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಶಿವಗ್ಗ ಸ್ಫೋಟದಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಭವಿಷ್ಯದಲ್ಲಿ ಈ ರೀತಿಯ ದುರಂತ ನಡೆಯುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳುವ ಅಗತ್ಯವಿದೆ. ದುರಂತದ ಬಗ್ಗೆ ಆಳವಾದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಶಿವಮೊಗ್ಗ ದುರಂತದ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದು, ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಕೂಡ ದುರಂತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದಲ್ಲಿ ಜಿಲೆಟೆನ್ ಸ್ಫೋಟ ಪ್ರಕರಣ; ಸಾವಿನ ಸಂಖ್ಯೆ 8ಕ್ಕೇರಿಕೆ
ಕಿಲೋಮೀಟರ್ ದೂರದವರೆಗೆ ಮೃತದೇಹಗಳು ಛಿದ್ರ ಛಿದ್ರವಾಗಿ ಬಿದ್ದಿವೆ
ಭೂಕಂಪನವಲ್ಲ; ಶಿವಮೊಗ್ಗ ಬಳಿ ಡೈನಮೈಟ್ ಸ್ಫೋಟ; 6 ಜನರ ಸಾವು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ