CrimeKannada NewsKarnataka NewsLatest

*ಗಾಂಜಾ ಮತ್ತಿನಲ್ಲಿ ಅಜ್ಜಿಯನ್ನು ಕೊಲೆಗೈದ ಮೊಮ್ಮಗನ ಮೇಲೆ ಪೊಲೀಸ್ ಫೈರಿಂಗ್*

ಪ್ರಗತಿವಾಹಿನಿ ಸುದ್ದಿ: ಗಾಂಜಾ ಮತ್ತಿನಲ್ಲಿ ಮೊಮ್ಮಗನೊಬ್ಬ ಅಜ್ಜಿಯನ್ನೇ ಕೊಲೆಗೈದಿದ್ದು, ಆರೋಪಿ ಮೇಲೆ ಗುಂಡಿನ ದಾಳಿ ನಡೆಸಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಶಿವಮೊಗ್ಗದಲಿ ಈ ಘಟನೆ ನಡೆದಿದೆ. ಮೊಮ್ಮಗ ಅಜ್ಜಿಯನ್ನೇ ಹತ್ಯೆ ಮಾಡಿದ್ದಾನೆ. ಕಿಶೋರ್ (28) ಅಜ್ಜಿಯನ್ನೇ ಕೊಂದ ಮೊಮ್ಮಗ.

ಕಿಶೋರ್ ಗಾಂಜಾ ಸೇವನೆ ಹಾಗೂ ಮಾರಾಟ ಮಾಡುತ್ತಿದ್ದ. ಈಬಗ್ಗೆ ಅಜ್ಜಿಯೇ ಮೊಮ್ಮಗನ ವಿರುದ್ಧ ದೂರು ನೀಡಿದ್ದರು. ಇದರಿಂದ ಕೋಪಗೊಂಡ ಕಿಶೋರ್, ಅಜ್ಜಿಯನ್ನು ಕೊಲೆಗೈದು ಎಸ್ಕೇಪ್ ಆಗಿದ್ದ. ಅಜ್ಜಿ ಸುಶೀಲಮ್ಮ ತಲೆ ಮೇಲೆ ಕಲ್ಲು ಎತ್ತಿ ಹಾಕಿ, ಸಾಯಿಸಿದ್ದಾನೆ.

ಶಿವಮೊಗ ಪೊಲೀಸರು ಆರೋಪಿ ಕಾಲಿಗೆ ಗುಂಡೇಟು ಹೊಡೆದು ಬಂಧಿಸಿದ್ದಾರೆ. ಶಿವಮೊಗ್ಗ ನಗರ ಹೊರವಲಯ ವಾಜಪೇಯಿ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ.

ಆರೋಪಿ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ. ತಕ್ಷಣವೇ ದೊಡ್ಡಪೇಟೆ ಇನ್‌ಸ್ಪೆಕ್ಟರ್ ಗಾಳಿಯಲ್ಲಿ ಫೈರ್ ಮಾಡಿ ಆರೋಪಿಗೆ ಎಚ್ಚರಿಕೆ ನೀಡಿದ್ದರು. ಮಾತು ಕೇಳದ ಹಿನ್ನೆಲೆಯಲ್ಲಿ ಕಿಶೋರ್ ಕಾಲಿಗೆ ಫೈರ್ ಮಾಡಿ ಬಂಧಿಸಿದ್ದಾರೆ.

ಗಾಯಾಳು ಕಿಶೋರ್‌ನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಪೊಲೀಸ್ ಸಿಬ್ಬಂದಿ ಗಣೇಶ್ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.


Related Articles

Back to top button