Kannada NewsKarnataka NewsLatest

*ಮಳೆ ಅಬ್ಬರಕ್ಕೆ ಮತ್ತೊಂದು ದುರಂತ: ಗೋಡೆ ಕುಸಿದು ಬಿದ್ದು ವೃದ್ಧೆ ಸಾವು; ನಾಲ್ವರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಮತ್ತೆ ಜೋರಾಗಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಿದ್ದು ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ.

ಶಿವಮೊಗ್ಗ ತಾಲೂಕಿನ ಮಂಡಗಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯ ಆಡುಗಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದುರಂತದಲ್ಲಿ ವೃದ್ಧೆ ಸಿದ್ದಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ನಾಲ್ವರ ಸ್ಥಿತಿ ಗಂಭೀರವಾಗಿವೆ.

ಹೇಮಾವತಿ, ಪರಶುರಾಮ್, ಪಲ್ಲವಿ, ಚೇತನ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button