*ಮಳೆ ಅಬ್ಬರಕ್ಕೆ ಮತ್ತೊಂದು ದುರಂತ: ಗೋಡೆ ಕುಸಿದು ಬಿದ್ದು ವೃದ್ಧೆ ಸಾವು; ನಾಲ್ವರ ಸ್ಥಿತಿ ಗಂಭೀರ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಮತ್ತೆ ಜೋರಾಗಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಿದ್ದು ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ. ಶಿವಮೊಗ್ಗ ತಾಲೂಕಿನ ಮಂಡಗಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯ ಆಡುಗಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದುರಂತದಲ್ಲಿ ವೃದ್ಧೆ ಸಿದ್ದಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ನಾಲ್ವರ ಸ್ಥಿತಿ ಗಂಭೀರವಾಗಿವೆ. ಹೇಮಾವತಿ, ಪರಶುರಾಮ್, ಪಲ್ಲವಿ, ಚೇತನ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.Home add -Advt … Continue reading *ಮಳೆ ಅಬ್ಬರಕ್ಕೆ ಮತ್ತೊಂದು ದುರಂತ: ಗೋಡೆ ಕುಸಿದು ಬಿದ್ದು ವೃದ್ಧೆ ಸಾವು; ನಾಲ್ವರ ಸ್ಥಿತಿ ಗಂಭೀರ*
Copy and paste this URL into your WordPress site to embed
Copy and paste this code into your site to embed