Kannada NewsKarnataka NewsLatest

*ಜೈಲಿನಲ್ಲಿದ್ದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ: ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರೇ ಶಾಕ್*

ಪ್ರಗತಿವಾಹಿನಿ ಸುದ್ದಿ: ಕಾರಾಗೃಹದಲ್ಲಿದ್ದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಪತ್ತೆಯಾಗಿರು ಘಟನೆ ಶಿವಮೊಗ್ಗ ಜಿಲ್ಲೆಯ ಸೋಗಾನೆ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.

ಖೈದಿ ದೌಲತ್ (30) ಎಂಬಾತನ ಹೊಟ್ಟೆಯೊಳಗೆ ಮೊಬೈಲ್ ಪತ್ತೆಯಾಗಿದೆ. ತಾನು ಕಲ್ಲನ್ನು ನುಂಗಿದ್ದೇನೆ ಎಂದು ಖೈದಿ ದೌಲತ್ ಕಾರಾಗೃಹದ ಆಸ್ಪತ್ರೆಗೆ ಬಂದು ತೋರಿಸಿದ್ದ. ಈ ವೇಳೆ ಪರಿಶೀಲಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿದ್ದರು.

ಮೆಗ್ಗಾನ್ ಆಸ್ಪತ್ರೆಯಲ್ಲಿ ಎಕ್ಸ್‌ರೇ ಮಾಡಿದಾಗ ಖೈದಿ ದೌಲತ್‌ ಹೊಟ್ಟೆಯಲ್ಲಿ ವಸ್ತುವೊಂದು ಇರುವುದು ಗೊತ್ತಾಗಿದೆ. ಶಸ್ತ್ರಚಿಕಿತ್ಸೆ ನಡೆಸಿದಾಗ ಅದು ಮೊಬೈಲ್‌ ಫೋನ್‌ ಎಂಬುದು ತಿಳಿದು ವೈದ್ಯರೇ ಕ್ಷಣ ಕಾಲ ದಂಗಾಗಿದ್ದಾರೆ.

ಸದ್ಯ ಖೈದಿಯ ಹೊಟ್ಟೆಯಲ್ಲಿದ್ದ ಮೊಬೈಲ್ ಫೋನ್ ಹೊರತೆಗೆಯಲಾಗಿದೆ. ಖೈದಿಗೆ ಜೈಲಿನಲ್ಲಿ ಮೊಬೈಲ್ ಫೋನ್ ಸಿಕ್ಕಿದ್ದು ಹೇಗೆ ಎಂಬ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button