CrimeKarnataka NewsLatest

*ಕುಡುಮಲ್ಲಿಗೆ ಸೊಸೈಟಿ ಸಿಇಒ ಏಕಾಏಕಿ ನಾಪತ್ತೆ*

ಪ್ರಗತಿವಾಹಿನಿ ಸುದ್ದಿ: ಕುಡುಮಲ್ಲಿಗೆ ಸೊಸೈಟಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ (ಸಿಇಒ) ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಮದನ್ ನಾಪತ್ತೆಯಾಗಿರುವ ಸಿಇಒ. ಶಿವಮೊಗ್ಗ ಜಿಲ್ಲೆಯ ಕುಡುಮಲ್ಲಿಗೆ ಸೊಸೈಟಿ ಸಿಇಒ ಆಗಿದ್ದ ಮದನ್ ಶುಕ್ರವಾರದಂದು ತೀರ್ಥಹಳ್ಳಿಯಲ್ಲಿರುವ ತಮ್ಮ ನಿವಾಸದಿಂದ ಹೊರಬಂದವರು ಬಳಿಕ ಮನೆಗೆ ಹೋಗಿಲ್ಲ. ಅಂದಿಇಂದ ನಾಪತ್ತೆಯಾಗಿದ್ದಾರೆ.

Home add -Advt

ಅವರು ಎಲ್ಲಿಗೆ ತೆರಳಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದರೆ ಈಗ ಅವರ ಕಾರು ರಿಪ್ಪನ್‌ಪೇಟೆಯ ಹೆದ್ದಾರಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಂಬಳ್ಳಿ ಬಳಿಯ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ.

ಅನಾಮಧೇಯ ಕಾರೊಂದು ನಿಗೂಢವಾಗಿ ಪತ್ತೆಯಾಗಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಕಾರು ಪತ್ತೆಯಾದ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಪರಿಶೀಲನೆ ನಡೆಸಿದಾಗ ಈ ಕಾರು ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಅವರಿಗೆ ಸೇರಿದ್ದು ಎಂಬುದು ತಿಳಿದುಬಂದಿದೆ.

​ಪತ್ತೆಯಾದ ಮಾರುತಿ ಸ್ವಿಫ್ಟ್ ಕಾರಿನಲ್ಲಿಯೇ ಕೀ ಬಿಡಲಾಗಿದೆ. ಕಾರಿನ ಒಳಭಾಗದಲ್ಲಿ ಮದನ್ ಅವರ ಮೊಬೈಲ್ ಫೋನ್ ಹಾಗೂ ಸೊಸೈಟಿಗೆ ಸೇರಿದ ಮಹತ್ವದ ಲೆಕ್ಕದ ಪುಸ್ತಕಗಳು ಪತ್ತೆಯಾಗಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಪೊಲೀಸರು ಮದನ್ ಗಾಗಿ ಹುಡುಕಾಟ ನಡೆಸಿದ್ದಾರೆ.

ಇತ್ತೀಚೆಗಷ್ಟೇ ಕುಡುಮಲ್ಲಿಗೆ ಸೊಸೈಟಿಯಲ್ಲಿ ಭಾರಿ ಭ್ರಷ್ಟಾಚಾರ ಹಾಗೂ ಆರ್ಥಿಕ ಅವ್ಯವಹಾರಗಳು ನಡೆದಿವೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು.ಈ ಬಗ್ಗೆ ಮಾಳೂರು ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ. ಇದರ ಬೆನ್ನಲ್ಲೇ ಸಿಇಒ ಮದನ್ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

Related Articles

Back to top button