Kannada NewsKarnataka NewsLatest

*ರಾತ್ರೋರಾತ್ರಿ ಕುಸಿದ ಗುಡ್ಡ: ಒಂದೇ ಕುಟುಂಬದ ಮೂವರು ಸಾವು*

ಪ್ರಗತಿವಾಹಿನಿ ಸುದ್ದಿ: ಕರಾವಳಿ, ಮಳೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಸಾಲು ಸಾಲು ಅನಾಹುತಗಳು ಸಂಭವಿಸುತ್ತಿವೆ. ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ಸಾವನಪ್ಪಿರುವ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ಗುಡ್ಡ ಕುಸಿದು ಈ ದುರಂತ ಸಂಭವಿಸಿದೆ. ಬೆಳಗಿನ ಜಾವ 2:30 ವೇಳೆಯಲ್ಲಿ ಮಳೆಯ ಆರ್ಭಟಕ್ಕೆ ಗುಡ್ಡ ಕುಸಿದಿದೆ ಎನ್ನಲಾಗಿದ್ದು, ಗುಡ್ಡದ ಕೆಳಭಾಗದಲ್ಲಿ ಶಡ್ ನಿರ್ಮಾಣ ಮಾಡಿಕೊಂಡು ಕುಟುಂಬ ವಾಸವಿತ್ತು ಎನ್ನಲಾಗಿದೆ. ಘಟನೆಯಲ್ಲಿ ಪಕ್ಕದ ಶೆಡ್​​ನಲ್ಲಿದ್ದವರಿಗೂ ಗಂಭೀರ ಗಾಯಗಳಾಗಿವೆ.

ಮೃತರನ್ನು ಮಲ್ಲಿಕಾರ್ಜುನ (35), ನಾಗವೇಣಿ (28), ಸಂತೋಷ (3) ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೊಕ್ಕರೆಗಾರು ಗ್ರಾಮದ ನಿವಾಸಿಗಳು.

ಮಣ್ಣಿನಡಿ ಸಿಲುಕಿ ಮೂವರೂ ಸಾವನಪ್ಪಿದ್ದಾರೆ. ಶವಗಳನ್ನು ಹೊರ ತೆಗೆಯಲು ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವವರನ್ನು ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button