ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದೆ.
ಶಿವಮೊಗ್ಗದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಂದೂ ವಿದ್ಯಾರ್ಥಿಗಳು ಧ್ವಜ ಸ್ತಂಭ ಹತ್ತಿ ಕೇಸರಿ ಬಾವುಟ ಹಾರಿಸಿ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಜಿಲ್ಲೆಯ ಪ್ರಮುಖ ರಸ್ತೆಗಳನ್ನು ತಡೆದು ಧರಣಿ ನಡೆಸಲಾಗಿದ್ದು, ಕಾಲೇಜು ಕಟ್ಟಡ, ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.
ಪರಿಸ್ಥಿತಿ ಕೈಮೀರುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಕೆಲವೆಡೆ ಲಾಠಿ ಚಾರ್ಜ್ ಮಾಡಿ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ. ಶಿವಮೊಗ್ಗದಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಸೂಚನೆ ನೀಡಿದ್ದಾರೆ.
ಜಿಲ್ಲೆಯಾದ್ಯಂತ ಬಿಗುವಿನ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಎರಡು ದಿನಗಳ ಕಾಲ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ