ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ರಾಜ್ಯದ ಹಲವೆಡೆ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಮೂವರು ಶಂಕಿತ ಉಗ್ರರನ್ನು ಶಿವಮೊಗ್ಗ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ತೀರ್ಥಹಳ್ಳಿಯ ಶಾರಿಕ್, ಯಾಸಿನ್ ಹಾಗೂ ಮಾಜ್ ಎಂದು ಗುರುತಿಸಲಾಗಿದ್ದು, ನಿಷೇಧಿತ ಉಗ್ರ ಸಂಘಟನೆ ಐಸಿಸ್ ಜೊತೆ ನಿರಂತರ ಸಂಪರ್ಕ ಹೊಂದಿದ್ದರು. ಅಲ್ಲದೇ ರಾಜ್ಯದ ಹಲವೆಡೆ ಭಯೋತ್ಪಾದಕ ಕೃತ್ಯವೆಸಗಲು ಒಳಸಂಚು ರೂಪಿಸಿದ್ದರು ಎಂಬ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ.
ಬಂಧಿತರ ಬಳಿ ಹಲವು ಸ್ಫೋಟಕ ವಸ್ತುಗಳು ಪತ್ತೆಯಾಗಿವೆ. ಬಂಧಿತ ಯಾಸಿನ್ ನನ್ನು ತೀವ್ರ ವಿಚಾರಣೆ ನಡೆಸಿರುವ ಪೊಲೀಸರು ಆತನನ್ನು ಕರೆದೊಯ್ದು ಸ್ಥಳ ಮಹಜರು ನಡೆಸಿದ್ದಾರೆ.
ಬೆಳಗಾವಿ: ಗ್ಯಾಸ್ ಸಿಲಿಂಡರ್ ಸ್ಫೋಟ; ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಮನೆ
https://pragati.taskdun.com/latest/belagaviyellapuragas-cyliner-blasthome/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ