Uncategorized

*ಹಾಫ್ ಹೆಲ್ಮೆಟ್ ಅಂಗಡಿಗಳ ಮೇಲೆ ಪೊಲೀಸ್ ದಾಳಿ*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಹಾಫ್ ಹೆಲ್ಮೆಟ್ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರು ದಾಳಿ ನಡೆಸಿ, ಐಎಸ್ಐ ಮಾರ್ಕ್ ಇಲ್ಲದ ಹೆಲ್ಮೆಟ್ ಗಳನ್ನು ವಶಕ್ಕೆ ಪಡೆದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗ ಮತ್ತು ಭದ್ರಾವತಿ ಪೊಲೀಸರು ಹಾಫ್ ಹೆಲ್ಮೆಟ್ ಮಾರಾಟದ ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾರೆ. ಐಎಸ್ ಐ ಗುರುತು ಇಲ್ಲದ 741 ಹೆಲ್ಮೆಟ್ ಗಳನ್ನು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗದ ಸಂಚಾರಿ ಪೊಲೀಸರು ಹಾಫ್ ಹೆಲ್ಮೆಟ್ ಧರಿಸಿ ಬಂದ ಬೈಕ್ ಸವಾರರ ವಿರುದ್ಧ ಕೇಸ್ ದಾಖಲಿಸಿದ್ದರು. ಇದಕ್ಕೆ ಬೈಕ್ ಸವಾರರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಘಟನೆ ಬೆನ್ನಲ್ಲೇ ಪೊಲೀಸರು ಹಾಫ್ ಹೆಲ್ಮೆಟ್ ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾರೆ.

ಡಿವೈಎಸ್ಪಿ ಸುರೇಶ್ ಎಂ, ಪೊಲೀಸ್ ವೃತ್ತ ನಿರೀಕ್ಷಕರು, ಪಿಐ ಸಂತೋಷ್ ಕುಮಾರ್, ಶಿವಮೊಗ್ಗ ಸಂಚಾರ ವೃತ್ತ ನೇತೃತ್ವದಲ್ಲಿ ಪೊಲೀಸ್ ಉಪ ನಿರೀಕ್ಷಕರುಗಳು ಶಿವಮೊಗ್ಗ ಪೂರ್ವ ಮತ್ತು ಪಶ್ಚಿಮ ಸಂಚಾರ ಪೊಲೀಸ್ ಠಾಣೆ ಹಾಗೂ ಸಿಬ್ಬಂಧಿಗಳ ತಂಡ ಶಿವಮೊಗ್ಗ ನಗರದಲ್ಲಿ ಐಎಸ್ಐ ಪ್ರಮಾಣಿತವಲ್ಲದ ಹಾಫ್ ಹೆಲ್ಮೆಟ್ ಗಳನ್ನು ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ.

ಒಟ್ಟು 600 ಐಎಸ್ಐ ಪ್ರಮಾಣಿತವಲ್ಲದ ಹೆಲ್ಮೆಟ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತು ಭದ್ರಾವತಿಯ ಡಿವೈಎಸ್ಪಿ ಜಿತೇಂದ್ರ ಕುಮಾರ್ ದಯಾಮ, ಮತ್ತು ಪಿಐ ರಾಘವೇಂದ್ರ ಕಾಂಡಿಕೆ ಭದ್ರಾವತಿ ನಗರದಲ್ಲಿ ಐಎಸ್ಐ ಪ್ರಮಾಣಿತವಲ್ಲದ ಹಾಫ್ ಹೆಲ್ಮೆಟ್ ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿ ಒಟ್ಟು 141 ಐಎಸ್ಐ ಪ್ರಮಾಣಿತವಲ್ಲದ ಹಾಫ್ ಹೆಲ್ಮೆಟ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಮೂಲಕ ಶಿವಮೊಗ್ಗ ನಗರದಲ್ಲಿ 600 ಮತ್ತು ಭದ್ರಾವತಿ ನಗರದಲ್ಲಿ 141 ಸೇರಿ ಒಟ್ಟು 741 ಐಎಸ್ಐ ಪ್ರಮಾಣಿತವಲ್ಲದ ಹಾಫ್ ಹೆಲ್ಮೆಟ್ ಗಳನ್ನು ವಶಪಡಿಸಿಕೊಂಡು ಅಂಗಡಿ ಮಾಲೀಕರುಗಳಿಗೆ ತಿಳುವಳಿಕೆ ಪತ್ರವನ್ನು ನೀಡಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button