
ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಕ್ರೆಬೈಲು ಬಳಿ ನಡೆದಿದೆ.
ಶಿವಮೊಗ್ಗದಿಂದ ತೆರಳುತ್ತಿದ್ದ ಖಾಸಗಿ ಬಸ್, ತೀರ್ಥಹಳ್ಳಿ ಕಡೆಯಿಂದ ಬರುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕೆ ಹೊಡೆದಿದೆ. ಬಸ್ ನಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಬಸ್ ನಲ್ಲಿದ್ದ 10ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯ ರಾಜಧಾನಿಯಲ್ಲಿ ಕನ್ನಡಿಗರ ರಣಕಹಳೆ; ರಾಜಭವನಕ್ಕೆ ಮುತ್ತಿಗೆಗೆ ಕರವೇ ಯತ್ನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ